ಸಿಎಂ ಸಿದ್ದರಾಮಯ್ಯ 
ರಾಜ್ಯ

ಆರೋಗ್ಯ ಸೂಚ್ಯಂಕದಲ್ಲಿ 18ನೇ ಸ್ಥಾನಕ್ಕೆ ಕುಸಿದ ಉಡುಪಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಉಡುಪಿ ಜಿಲ್ಲೆಯು ಆರೋಗ್ಯ ಸೂಚ್ಯಂಕದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳೂರು: ಉಡುಪಿ ಜಿಲ್ಲೆಯು ಆರೋಗ್ಯ ಸೂಚ್ಯಂಕದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ತಾಯಂದಿರು ಮತ್ತು ಮಕ್ಕಳ ಮರಣ ಪ್ರಮಾಣ ಹೆಚ್ಚಾಗುತ್ತಿರುವುದು ಆರೋಗ್ಯ ಸೂಚ್ಯಂಕ ಇಳಿಮುಖವಾಗಲು ಕಾರಣ ಎಂದರು.

2015ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಮೊದಲ ಸ್ಥಾನ ಪಡೆದಿದ್ದ ಉಡುಪಿ, ಈಗ 18ನೇ ಸ್ಥಾನಕ್ಕೆ ಕುಸಿದಿದೆ. ತಾಯಿ, ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿರುವುದೇ ಇದಕ್ಕೆ ಕಾರಣ. ಆರೋಗ್ಯ ಕ್ಷೇತ್ರದಲ್ಲಿ ಜಿಲ್ಲೆ ಮತ್ತೆ ಉನ್ನತ ಸ್ಥಾನ ಪಡೆಯಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು ಮತ್ತು ಪರಿಸ್ಥಿತಿಯನ್ನು ಸಾಕಷ್ಟು ಸುಧಾರಿಸದಿದ್ದರೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಕಚೇರಿಗಳಲ್ಲಿ ಮಾತ್ರ ಕಾರ್ಯನಿರ್ವಹಿಸದೆ ಸ್ಥಳದಲ್ಲಿಯೇ ನಿಯಮಿತವಾಗಿ ತಪಾಸಣೆ ನಡೆಸುವ ಮೂಲಕ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸಿದ್ದರಾಮಯ್ಯ ಆದೇಶಿಸಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT