ಡಾ ಡಿ ವೀರೇಂದ್ರ ಹೆಗ್ಗಡೆ(ಸಂಗ್ರಹ ಚಿತ್ರ) 
ರಾಜ್ಯ

ಸೌಜನ್ಯ ಸಾವಿನ ಕೇಸು: ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ

2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಬೆಳ್ತಂಗಡಿ: 2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸೌಜನ್ಯ ಸಾವು ಪ್ರಕರಣ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮತ್ತು ನಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಕೂಡ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಹೊರಡಿಸಿರುವ ಅವರು, ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿಐಡಿ ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ನಂತರದಲ್ಲಿ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಶ್ರೀ ಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗು ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. 

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಈ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ. 

ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಮಾಧ್ಯಮದಗಳಿಂದ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇತ್ತೀಚೆಗೆ ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT