ಎಚ್ ಡಿ ರೇವಣ್ಣ 
ರಾಜ್ಯ

ಚುನಾವಣಾ ಅಕ್ರಮ ಆರೋಪ: ಶಾಸಕ ಎಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಸಮನ್ಸ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಶಾಸಕ ಎಚ್ ಡಿ ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಶಾಸಕ ಎಚ್ ಡಿ ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ. 

ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ನೇತೃತ್ವದ ಪೀಠ ಸಮನ್ಸ್ ಜಾರಿ ಮಾಡಿದೆ. ರೇವಣ್ಣ ಅಕ್ರಮದ ಮೂಲಕ ಚುನಾವಣೆಯಲ್ಲಿ ಗೆದ್ದು ಶಾಸಕರಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡರು ವಾಗ್ದಾಳಿ ನಡೆಸಿದರು. 

ರೇವಣ್ಣ ಮತದಾರರಿಗೆ ನಗದು, ಕೋಳಿ ಮಾಂಸ ವಿತರಿಸಿ ಮತ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಮನವಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಅವರನ್ನು ಪರಾಜಿತ ಎಂದು ಘೋಷಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದರು. ಚುನಾವಣೆಯ ಹಿಂದಿನ ದಿನ ರೇವಣ್ಣ ಅವರ ಸಹಚರರು ಮತ್ತು ಬೆಂಬಲಿಗರು ಅನ್ನೇನಹಳ್ಳಿ, ದಂಡಿಗನಹಳ್ಳಿಯಲ್ಲಿ ಪ್ರತಿ ಮನೆಗೆ ಎರಡು ಜೀವಂತ ಕೋಳಿ ಮತ್ತು 3 ಸಾವಿರ ರೂ.ನಗದನ್ನು ವಿತರಿಸಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ. 

ಇದನ್ನು ನಾನು ಪ್ರಶ್ನಿಸಿದಾಗ, ರೇವಣ್ಣ ಬೆಂಬಲಿಗರು ನಮ್ಮ ಕಾರನ್ನು ಅಡ್ಡಗಟ್ಟಿ, ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದಾರೆ. ದೊಣ್ಣೆ ಹಾಗೂ ಕಲ್ಲುಗಳಿಂದ ವಾಹನದ ಮೇಲೆ ದಾಳಿ ನಡೆಸಿದ್ದರು. ರೇವಣ್ಣ ಬೆಂಬಲಿಗರು ನನ್ನ ಗನ್‌ಮ್ಯಾನ್ ಮತ್ತು ವೈಯಕ್ತಿಕ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಈ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ರೇವಣ್ಣ ಅವರ ಕೃತ್ಯಗಳು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123ಕ್ಕೆ ವಿರುದ್ಧವಾಗಿದ್ದು, ಅಕ್ರಮ ನಡೆದಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ರೇವಣ್ಣ ಅವರು ಬ್ಯಾಂಕ್ ಠೇವಣಿಗಳ ವಿವರವನ್ನೂ ಬಹಿರಂಗಪಡಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಹೀಗಾಗಿ ಅವರ ಉಮೇದುವಾರಿಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ದೇವರಾಜೇಗೌಡ ಮೂರನೇ ಸ್ಥಾನ ಪಡೆದು ವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ರೇವಣ್ಣ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಎಂ. ಪಟೇಲ್‌ 3,152 ಮತಗಳಿಂದ ಸೋತರು. ಅರ್ಜಿದಾರ ದೇವರಾಜೇಗೌಡ ಅವರು ಸಹ ಚುನಾವಣಾ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಆರೋಪವನ್ನು ಶ್ರೇಯಸ್ ಪಾಟೀಲ್ ವಿರುದ್ಧ ಮಾಡಿದ್ದು, ನ್ಯಾಯಾಲಯವೂ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT