ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ

ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಮೃತರನ್ನು ಮಹಮ್ಮದ್ ಗುಡ್ಡು ಮನ್ಸೂರ್ (38) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಚರಣ್ ಮತ್ತು ನಾರಾಯಣಪ್ಪ ಎಂದು ಗುರ್ತಿಸಲಾಗಿದೆ .ಇಬ್ಬರು ಆರೋಪಿಗಳನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಬ್ಬರೂ ಮನ್ಸೂನ್ ನನ್ನು ಪಾರ್ಟಿಗೆ ಆಹ್ವಾನಿಸಿದ್ದು, ಖಾಲಿ ಜಮೀನಿನಲ್ಲಿ ಮೂವರೂ ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರ ನಡುವೆ ಜಗಳ ನಡೆದಿದೆ ಈ ವೇಳೆ ಆರೋಪಿಗಳು ಮನ್ಸೂರ್ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಬಳಿಕ ಆರೋಪಿ ನಾರಾಯಣಪ್ಪ ಮನ್ಸೂರ್ ಶವವನ್ನು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಪೊಲೀಸರು ನಾರಾಯಣಪ್ಪನನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಚರಣ್ ಜೊತೆಗೆ ಸೇರಿ ಮನ್ಸೂರ್ ನನ್ನು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ಇದರಂತೆ ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಮನ್ಸೂರ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಚರಣ್ ಶಂಕಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel