ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರು ಸಾವು; ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ನಗರದ ಹೊರವಲಯದಲ್ಲಿರುವ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ನಡುವೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 100ರ ಗಡಿ ದಾಟಿದೆ.

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ನಡುವೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 100ರ ಗಡಿ ದಾಟಿದೆ.

ಚಿತ್ರದುರ್ಗದ ವಡ್ಡರಸಿದ್ದವ್ವನಹಳ್ಳಿಯ ಪ್ರವೀಣ್ (25) ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಈ ಮಧ್ಯೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಈ ನಡುವೆ ಕಲುಷಿತ ನೀರು ಸೇವಿಸಿ ಅಸುನೀಗಿದ್ದ ಮಂಜುಳಾ ಅಂತ್ಯ ಸಂಸ್ಕಾರ ಮಾಡಲು ಪೋಷಕರು ಬೆಳಿಗ್ಗೆ ನಿರಾಕರಿಸಿದ್ದರಿಂದ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಪರಿಹಾರ ನೀಡದ ಹೊರತು ಅಂತ್ಯ ಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಬಿಗಿಪಟ್ಟು ಹಿಡಿದ್ದರು.

ಮಧ್ಯಾಹ್ನ ವೇಳೆಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು, ಎಸ್ಪಿ ಪರಶುರಾಂ ಮೃತ ಮಂಜುಳಾ ನಿವಾಸಕ್ಕೆ ಆಗಮಿಸಿ ಪೋಷಕರು, ಪತಿ ಹಾಗೂ ಹರಳಯ್ಯ ಸ್ವಾಮೀಜಿಯೊಂದಿಗೆ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಅಂತಿಮವಾಗಿ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.

ಏತನ್ಮಧ್ಯೆ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ವರದಿ ಪಡೆಯಲು 4 ಮಂದಿ ಅಧಿಕಾರಿಗಳ ಸಮಿತಿ ನಿಯೋಜಿಸಲಾಗಿದೆ.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ.

ಇನ್ನು ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣ ಮಾಹಿತಿ ಪಡೆದುಕೊಂಡಿದ್ದು, ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel