ತುಂಗಾಭದ್ರಾ ಜಲಾಶಯ( ಸಂಗ್ರಹ ಚಿತ್ರ) 
ರಾಜ್ಯ

ಜಲಾಶಯಗಳು ಇನ್ನೂ ತುಂಬಿಲ್ಲ; ಬೇಕಾಬಿಟ್ಟಿ ಬಳಸಬೇಡಿ, ವಿವೇಚನೆಯಿಂದ ನೀರು ಉಪಯೋಗಿಸಿ: ತಜ್ಞರ ಸಲಹೆ

ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ, ಆದರೂ ಜಲಾಶಯಗಳು ತುಂಬುವಷ್ಟು ಪ್ರಮಾಣದಲ್ಲಿ ಮಳೆಸುರಿದಿಲ್ಲ ಎಂದು ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು: ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ, ಆದರೂ ಜಲಾಶಯಗಳು ತುಂಬುವಷ್ಟು ಪ್ರಮಾಣದಲ್ಲಿ ಮಳೆಸುರಿದಿಲ್ಲ ಎಂದು ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಜಲಾಶಯಗಳು ಶೇ. 67 ರಷ್ಟು ತುಂಬಿವೆ. ಒಳಹರಿವು ಕಡಿಮೆ ಇರುವ ಕಾರಣ  ನೀರನ್ನು ವಿವೇಚನೆಯಿಂದ ಬಳಸಬೇಕು ಎಂದು ಅಧಿಕಾರಿಗಳು ಮತ್ತು ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ.

ಜಲಾನಯನ ಪ್ರದೇಶಗಳಲ್ಲಿ ಮಳೆಯಿಲ್ಲದೆ, ನೈಋತ್ಯ ಮಾನ್ಸೂನ್ ದುರ್ಬಲವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿರುವುದರಿಂದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಉತ್ತಮವಾಗಿರುವಂತೆ ತೋರುತ್ತಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ನೀರನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲ ಪಾಲುದಾರರಿಗೆ ನಿರ್ದೇಶನಗಳನ್ನು ನೀಡಬೇಕೆಂದು ನಾವು ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ವಿನಂತಿಸುತ್ತಿದ್ದೇವೆ ಎಂದಿದ್ದಾರೆ.

ಯಾವುದೇ ಕೊರತೆಯಾಗದಂತೆ ನೀರಿನ ಪರ್ಯಾಯ ಮೂಲಗಳನ್ನು ಸಹ  ಹುಡುಕಬೇಕಾಗಿದೆ. ಆದೇಶಗಳ ಹೊರತಾಗಿಯೂ ಅಂತರ್ಜಲ ಮಟ್ಟವನ್ನು ಮರುಪೂರಣಗೊಳಿಸುವುದು ಮತ್ತು ಮಳೆನೀರು ಕೊಯ್ಲುಗಳನ್ನು ಹೆಚ್ಚೆಚ್ಚು ಕೈಗೊಳ್ಳದಿರುವುದು ಅತ್ಯಂತ ದುರದೃಷ್ಟಕರ ಎಂದು ಅಧಿಕಾರಿಯೊಬ್ಬರು ಹೇಳಿದರು.

ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಒಳಹರಿವು ಈಗ 35-40 ಟಿಎಂಸಿಯಿಂದ 17 ಟಿಎಂಸಿಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

SCROLL FOR NEXT