ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಡೆಂಗ್ಯೂ ಪ್ರಕರಣ ತಡೆಗೆ ಜಿಲ್ಲಾಡಳಿತದಿಂದ ಕ್ರಮ; ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನ ಆರಂಭ

ಕಲಬುರಗಿ ಜಿಲ್ಲೆಯಲ್ಲಿ ದಿಢೀರನೆ ಡೆಂಗ್ಯೂ ಜ್ವರ ಹೆಚ್ಚಾಗಿದ್ದು, ಜನರು ಆತಂಕ ಪಡುವಂತೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನವನ್ನು ಕಲಬುರಗಿ ಜಿಲ್ಲಾಡಳಿತ ಆರಂಭಿಸಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ದಿಢೀರನೆ ಡೆಂಗ್ಯೂ ಜ್ವರ ಹೆಚ್ಚಾಗಿದ್ದು, ಜನರು ಆತಂಕ ಪಡುವಂತೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನವನ್ನು ಕಲಬುರಗಿ ಜಿಲ್ಲಾಡಳಿತ ಆರಂಭಿಸಿದೆ.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಮಾತನಾಡಿ, ಕಳೆದ ಎರಡು ವಾರಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ನೀರು ಅಲ್ಲಲ್ಲಿ ನಿಲ್ಲುತ್ತಿದೆ. ನಾವು ಈಗಾಗಲೇ ಫಾಗಿಂಗ್ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ವಿಶೇಷವಾಗಿ ತಗ್ಗು ಮತ್ತು ಕೊಳೆಗೇರಿ ಪ್ರದೇಶಗಳಲ್ಲಿ ಗಮನ ಹರಿಸಲಾಗಿದೆ ಎಂದರು.

'ನಾವು ಆರೋಗ್ಯ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಲಾರ್ವಾ ಸಮೀಕ್ಷೆ ನಡೆಸಲು ನಮ್ಮ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಎರಡು ಅಥವಾ ಮೂರು ದಿನಗಳಿಗಿಂತ ಹೆಚ್ಚು ಕಾಲ ನೀರನ್ನು ಸಂಗ್ರಹಿಸದಂತೆ ನಾನು ಎಲ್ಲಾ ನಾಗರಿಕರಿಗೂ ವಿನಂತಿಸುತ್ತೇನೆ' ಎಂದು ಅವರು ಹೇಳಿದರು.

ಪರಾವಲಂಬಿಗಳು, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಹರಡುವ ರೋಗಗಳಲ್ಲಿ ಆರು ವಿಧಗಳಿವೆ. ಅವೆಂದರೆ ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ, ಜಪಾನೀಸ್ ಎನ್ಸೆಫಾಲಿಟಿಸ್, ಲಿಂಫಾಟಿಕ್ ಫೈಲೇರಿಯಾಸಿಸ್, ಕಾಲಾ-ಅಜರ್ ಆಗಿವೆ. ಅವು ಸೀಸನಲ್ ಮತ್ತು ಏಕಾಏಕಿ ಉಲ್ಬಣಗೊಳ್ಳುತ್ತವೆ. ಲಿಂಫಾಟಿಕ್ ಫೈಲೇರಿಯಾಸಿಸ್ ಹೊರತುಪಡಿಸಿ, ಮುಂಗಾರು ಮತ್ತು ಮುಂಗಾರು ನಂತರದ ಅವಧಿಯಲ್ಲಿ ಸಾಮಾನ್ಯವಾಗಿ ಏಕಾಏಕಿ ಕಾಣಿಸಿಕೊಳ್ಳುತ್ತದೆ.

ಇವುಗಳ ನಿಯಂತ್ರಣಕ್ಕಾಗಿ ವೆಕ್ಟರ್ ಆಶ್ರಿತ ರೋಗಗಳ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕೇಂದ್ರವು (NCVBDC) ನೀತಿಗಳು/ಮಾರ್ಗಸೂಚಿಗಳನ್ನು ರೂಪಿಸುತ್ತದೆ. ಈ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ತಾಂತ್ರಿಕ ಮತ್ತು ಆರ್ಥಿಕ ಸಹಾಯವನ್ನು (ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಮಗಳ ಪ್ರಕಾರ) ಒದಗಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT