ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶಿವಾಜಿನಗರದಲ್ಲಿ ಕಟ್ಟಡ ಮೇಲಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್; ಮೃತರ ಸಂಖ್ಯೆ 3ಕ್ಕೆ ಏರಿಕೆ

ಶಿವಾಜಿನಗರ ಜನನಿಬಿಡ ಪ್ರದೇಶದಲ್ಲಿ ಫುಡ್ ಸ್ಟಾಲ್ ಮೇಲೆ ಕಳೆದ ತಡರಾತ್ರಿ ನೀರಿನ ಟ್ಯಾಂಕ್  ಕುಸಿದುಬಿದ್ದು ಮೂವರು ಮೃತಪಟ್ಟಿದ್ದಾರೆ. ದುರ್ಘಟನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನಗರದ ಜನನಿಬಿಡ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟಿರುವ ದುರ್ಘಟನೆ ಕಳೆದ ರಾತ್ರಿ ಸಂಭವಿಸಿದೆ. 

ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಗ್ ರೈಸ್ ಮಾರಾಟ ಮಾಡುತ್ತಿದ್ದ ತಳ್ಳುಗಾಡಿ ಕಟ್ಟಡದ ಪಕ್ಕದ ಫುಟ್‌ಪಾತ್‌ನಲ್ಲಿತ್ತು. ಇದ್ದಕ್ಕಿದ್ದಂತೆ, ನೀರಿನ ಟ್ಯಾಂಕ್ ಮತ್ತು ಪ್ಯಾರಪೆಟ್ ಗೋಡೆಯ ಒಂದು ಭಾಗವು ಮಾರಾಟಗಾರರು ಮತ್ತು ಗ್ರಾಹಕರ ಮೇಲೆ ಕುಸಿದಿದೆ.

ಗಾಯಗೊಂಡ ಮೂವರನ್ನು ಹತ್ತಿರದಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅರುಲ್ ಮತ್ತು ಕೋಟಾ ನಾಗೇಶ್ವರ್ ರಾವ್ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕರಣ್ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT