ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಖಾತರಿ ಯೋಜನೆಗಳಿಗೆ ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಎಎಪಿ ಬೃಹತ್ ಪ್ರತಿಭಟನೆ

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆಗೆ (ಟಿಎಸ್‌ಪಿ) ಮೀಸಲಿಟ್ಟಿರುವ 11,000 ಕೋಟಿ ರೂ.ಗಳನ್ನು ತನ್ನ ಖಾತರಿ ಯೋಜನೆಗಳಿಗೆ ಬಳಸಿಕೊಳ್ಳುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕವು ಶನಿವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆಗೆ (ಟಿಎಸ್‌ಪಿ) ಮೀಸಲಿಟ್ಟಿರುವ 11,000 ಕೋಟಿ ರೂ.ಗಳನ್ನು ತನ್ನ ಖಾತರಿ ಯೋಜನೆಗಳಿಗೆ ಬಳಸಿಕೊಳ್ಳುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕವು ಶನಿವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಎಸ್‌ಸಿ-ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಎಎಪಿ ಎಸ್‌ಸಿ ಮತ್ತು ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಪುರುಷೋತ್ತಮ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

'ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳಿಗೆ ಮೀಸಲಿಟ್ಟ 11,130 ಕೋಟಿ ರೂ.ಗಳನ್ನು ಖಾತರಿ ಯೋಜನೆಗಳನ್ನು ಪೂರೈಸಲು ಬಳಸುತ್ತಿರುವುದು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಮಾಡಿದ ಘೋರ ಅನ್ಯಾಯವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಕೂಡ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಇತರ ಯೋಜನೆಗಳಿಗೆ ವರ್ಗಾಯಿಸಿತ್ತು. ಹಾಗಾಗಿ ತುಳಿತಕ್ಕೊಳಗಾದ ಸಮುದಾಯದ ಜನರು ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಬಿಜೆಪಿ ವಿರುದ್ಧ ಮತ ಚಲಾಯಿಸಿದರು. ದುರದೃಷ್ಟವಶಾತ್, ಈಗಿನ ಸರ್ಕಾರದಿಂದಲೂ ಸಮುದಾಯಗಳು ಮತ್ತೆ ವಂಚಿತವಾಗುತ್ತಿವೆ' ಎಂದು ಹೇಳಿದರು.

ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಎಎಪಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ನಡೆಸಲಿದೆ ಮತ್ತು ವಿವಿಧ ದಲಿತ ಪರ ಸಂಘಟನೆಗಳು ಬೆಂಬಲ ನೀಡಿವೆ ಎಂದರು.

'ಆರಗ ಜ್ಞಾನೇಂದ್ರರನ್ನು ಅನರ್ಹಗೊಳಿಸಿ'

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿರುವ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

'ಮಾಜಿ ಗೃಹ ಸಚಿವರ ಹೇಳಿಕೆಯು ಇಡೀ ದಲಿತ ಸಮುದಾಯ ಮತ್ತು ಉತ್ತರ ಕರ್ನಾಟಕದ ಜನರಿಗೆ ಅವಮಾನ ಮಾಡಿದೆ ಮತ್ತು ಅಂತಹ ಹೇಳಿಕೆಗಳನ್ನು ಸಹಿಸಬಾರದು' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

SCROLL FOR NEXT