ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ರೇಪ್ ಮಾಡಿ ಕೇಕ್ ತಿನ್ನಿಸಿ ಕಳುಹಿಸಿದ ಪ್ರಿನ್ಸಿಪಾಲ್ ಬಂಧನ

ಶಾಲೆಯಲ್ಲಿಯೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರು:  10 ವರ್ಷದ ಡಿಸ್ಲೆಕ್ಸಿಕ್ (ನಿಧಾನಗತಿಯಲ್ಲಿ ಮಾತನಾಡುವುದು, ತಡವಾಗಿ ಪ್ರತಿಕ್ರಿಯಿಸುವುದು) ನಿಂದ ಬಳಲುತ್ತಿದ್ದ ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

65 ವರ್ಷದ ಆರೋಪಿ ಶಾಲೆಯ ಮಾಲೀಕನೂ ಆಗಿದ್ದಾನೆ. ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯ ಖಾಲಿ ತರಗತಿಯೊಳಗೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಬಾಲಕಿಗೆ ಆಮೀಷವೊಡ್ಡಿದ ಪ್ರಾಂಶುಪಾಲ ಆಕೆಯನ್ನು ತರಗತಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಮನೆಗೆ ಹಿಂದಿರುಗಿದ ನಂತರ, ಸಂತ್ರಸ್ತೆ ತನ್ನ ತಾಯಿಗೆ ತನ್ನ ನೋವಿನ ಬಗ್ಗೆ ವಿವರಿಸಿದ್ದಾಳೆ. ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಗಸ್ಟ್ 3 ರಂದು ಎಂದಿನಂತೆ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು  ಬಂಧಿಸಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಮತ್ತು ಭಾರತೀಯ ದಂಡ ಸಂಹಿತೆಯ 376 (ಅತ್ಯಾಚಾರ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಸಂತ್ರಸ್ತೆಯ ತಾಯಿ ಗೃಹಿಣಿಯಾಗಿದ್ದು, ಆಕೆಯ ತಂದೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ 2020 ರಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT