ರಾಜ್ಯ

ಉಡುಪಿ ವಿದ್ಯಾರ್ಥಿನಿ ವಿಡಿಯೊ ಪ್ರಕರಣ ಎಸ್ ಐಟಿಗೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Sumana Upadhyaya

ಬೆಂಗಳೂರು: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣವನ್ನು ಸಹಪಾಠಿಗಳು ಮಾಡಿರುವ ಪ್ರಕರವನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಬಿಜೆಪಿ ತೀವ್ರ ಪ್ರಯತ್ನ ಮಾಡುತ್ತಿದೆ.

ಇಂದು ರಾಜ್ಯಪಾಲರ ಬಳಿ ಹೋದ ಬಿಜೆಪಿ ನಿಯೋಗ ಪ್ರಕರಣವನ್ನು ವಿಶೇಷ ತನಿಖಾ ತಂಡ(SIT)ಯಿಂದ ತನಿಖೆ ನಡೆಸಬೇಕು. ಎಸ್ ಐಟಿ ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಬಿಜೆಪಿ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯ ಜನಪ್ರತಿನಿಧಿಗಳ ನಿಯೋಗದಿಂದ ಮನವಿ ಮಾಡಿಕೊಳ್ಳಲಾಗಿದೆ. 

ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ: ಉಡುಪಿ ವಿದ್ಯಾರ್ಥಿನಿ ವಿಡಿಯೊ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ. ಗೃಹ ಸಚಿವರು ಉಡಾಫೆ ಉತ್ತರ ಕೊಡುತ್ತಿದ್ದಾರೆ. ಆರೋಪಿಗಳಿಗೆ ನಿಷೇಧಿತ ಸಂಘಟನೆಗಳ ಜೊತೆ ಸಂಪರ್ಕ ಇದೆ. ಈ ಎಲ್ಲಾ ಗಂಭೀರವಾದ ವಿಚಾರಗಳ ಬಗ್ಗೆ ತನಿಖೆಯಾಗಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳಿಗೆ ರಾಜ್ಯಪಾಲರು ಸೂಚನೆ ನೀಡಬೇಕೆಂದು ಎರಡೂ ಜಿಲ್ಲೆಗಳ ಜನಪ್ರತಿನಿಧಿಗಳು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

SCROLL FOR NEXT