ಕರ್ನಾಟಕ ಲೋಕಾಯುಕ್ತ 
ರಾಜ್ಯ

ಬೆಂಗಳೂರು: ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ, ಹಲವು ಕಡತಗಳು ವಶಕ್ಕೆ

ಲೋಕಾಯುಕ್ತ, ಉಪ ಲೋಕಾಯುಕ್ತ ಮತ್ತು ನ್ಯಾಯಾಂಗ ಅಧಿಕಾರಿಗಳು ಗುರುವಾರ ನಗರದಾದ್ಯಂತ ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಲೋಕಾಯುಕ್ತ, ಉಪ ಲೋಕಾಯುಕ್ತ ಮತ್ತು ನ್ಯಾಯಾಂಗ ಅಧಿಕಾರಿಗಳು ಗುರುವಾರ ನಗರದಾದ್ಯಂತ ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ದುರಾಡಳಿತದ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದರಿಂದ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಬಿಬಿಎಂಪಿ ಸಿಬ್ಬಂದಿ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದರು ಎಂದು ದೂರುಗಳು ಕೇಳಿಬಂದಿದ್ದವು.

ದಾಳಿ ಸಮಯದಲ್ಲಿ, ಪಾಲಿಕೆ ಕಚೇರಿಗಳಲ್ಲಿ ದಾಖಲೆ ಇರದ ನಗದು ಮತ್ತು ಹಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆಯಲ್ಲಿ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಕೆಲವು ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದರು.

ಬೆಂಗಳೂರು ಪೂರ್ವ, ಬೊಮ್ಮನಹಳ್ಳಿ, ಯಲಹಂಕ, ಮಹದೇವಪುರ, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ವಿಜಯನಗರ, ಬಸವನಗುಡಿ, ರಾಜರಾಜೇಶ್ವರಿ ನಗರ, ಯಶವಂತಪುರ ಮತ್ತು ದಾಸರಹಳ್ಳಿಯ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

13 ನ್ಯಾಯಾಂಗ ಅಧಿಕಾರಿಗಳು, 7 ಪೊಲೀಸ್ ವರಿಷ್ಠಾಧಿಕಾರಿಗಳು, 19 ಉಪ ಪೊಲೀಸ್ ವರಿಷ್ಠಾಧಿಕಾರಿಗಳು, 26 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ಹಲವು ಪೊಲೀಸರು ಈ ಕಾರ್ಯಾಚರಣೆಯ ಭಾಗವಾಗಿದ್ದರು.

ಕರ್ನಾಟಕ ಲೋಕಾಯುಕ್ತದ ಡಿಜಿಪಿ ಮತ್ತು ಐಜಿಪಿ ಮೇಲ್ವಿಚಾರಣೆಯಲ್ಲಿ ದಾಳಿ ನಡೆಸಲಾಗಿದೆ. ನಗರದ ಅಕ್ಕಪಕ್ಕದ ಜಿಲ್ಲೆಗಳ ಲೋಕಾಯುಕ್ತ ಕಚೇರಿಯ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ, ಕಂದಾಯ ಮತ್ತು ಪಟ್ಟಣ ಯೋಜನಾ ಕಚೇರಿಗಳ ಸಿಬ್ಬಂದಿ ಯಾವುದೇ ಪ್ರಮಾಣ ಪತ್ರ ನೀಡಬೇಕಿದ್ದರೂ 50 ಸಾವಿರ ರೂ. ಗೂ ಹೆಚ್ಚು ಲಂಚಕ್ಕೆ ಬೇಡಿಕೆಯಿಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಖಾತೆ ವರ್ಗಾವಣೆ, ಖಾತೆ ನೋಂದಣಿ, ಕಟ್ಟಡಗಳಿಗೆ ಪರವಾನಗಿ, ಪ್ರಾರಂಭಿಕ ಪ್ರಮಾಣ ಪತ್ರ, ವಾಣಿಜ್ಯ ಪರವಾನಗಿ, ಜನನ ಮತ್ತು ಮರಣ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ನೀಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ. 

ಬಿಬಿಎಂಪಿ ಸಿಬ್ಬಂದಿ ವಿರುದ್ಧ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT