ಸಾಂದರ್ಭಿಕ ಚಿತ್ರ 
ರಾಜ್ಯ

ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಕೇರಳದಲ್ಲಿ ಸಿಕ್ಕಿಬಿದ್ದ ನಾಲ್ವರು ಕರ್ನಾಟಕದ ಪೊಲೀಸರ ಅಮಾನತು!

ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಬೆಂಗಳೂರು: ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಈ ಸಂಬಂಧ ಎಸಿಪಿ ನೀಡಿದ ವರದಿ ಮೇರೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡ ಪೊಲೀಸರನ್ನು ಇನ್ಸ್ ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ ಸ್ಟೇಬಲ್ ಗಳಾದ ವಿಜಯ್ ಕುಮಾರ್, ಶಿವಣ್ಣ ಮತ್ತು ಕಾನ್ ಸ್ಟೇಬಲ್ ಸಂದೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಸೈಬರ್ ಕ್ರೈಮ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉದ್ಯೋಗ ಕೊಡಿಸುವ ನೆಪದಲ್ಲಿ 26 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಶ್ರೀಕಾಂತ್ ಎಂಬುವರು ಜೂನ್ 16ರಂದು ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಡಿಕೇರಿ ಮೂಲದ ಐಸಾಕ್ ಎಂಬಾತನ ಖಾತೆಗೆ ತನಿಖೆಯ ವೇಳೆ 10,000 ರೂ. ವರ್ಗಾವಣೆ ಆಗಿರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಐಸಾಕ್​ ವಿಚಾರಣೆ ವೇಳೆ ಬ್ಯಾಂಕ್ ಖಾತೆಯನ್ನು ರಾಜೇಶ್ ಎಂಬಾತನ ಪರವಾಗಿ ತೆರೆಯಲಾಗಿದೆ ಎಂಬುದನ್ನು ಅರಿತ ಪೊಲೀಸರು ಆತನ ವಿಚಾರಣೆ ನಡೆಸಿದ್ದರು. ಈ ವೇಳೆ ಕೇರಳದ ನೌಶಾದ್‌ನ ಹೆಸರು ಹೊರಬಂದಿತ್ತು.

ಹೀಗಾಗಿ ಆರೋಪಿ ಪೊಲೀಸ್ ತಂಡ ಕೇರಳದ ಕಲ್ಲೇಂಚೇರಿಗೆ ತೆರಳಿ ನೌಶಾದ್ ನನ್ನು ವಶಕ್ಕೆ ಪಡೆದು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಹಣ ನೀಡಲು ವಿಫಲವಾದರೆ ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನೌಶಾದ್ ಕರ್ನಾಟಕ ಪೊಲೀಸರ ವಿರುದ್ಧ ಕಲಮಶ್ಶೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೌಶಾದ್ ಆರೋಪ ಕರ್ನಾಟಕ ಪೊಲೀಸ್ ಇಲಾಖೆಯನ್ನು ದೊಡ್ಡ ಮುಜುಗರದ ಪರಿಸ್ಥಿತಿಗೆ ತಂದಿತ್ತು. ಬೆಂಗಳೂರು ಪೊಲೀಸ್ ಕಮಿಷನರೇಟ್ ಎಸಿಪಿ ಶ್ರೇಣಿಯ ಅಧಿಕಾರಿಯನ್ನು ಕೇರಳಕ್ಕೆ ತನಿಖೆ ಮತ್ತು ವಿವರಗಳನ್ನು ಖಚಿತಪಡಿಸಿಕೊಳ್ಳಲು ಕಳುಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT