ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ. 
ರಾಜ್ಯ

ಗೃಹ ಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ

ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು.

ಕಲಬುರಗಿ: ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು.

ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್‌ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್,‌ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿ ಹಲವರು ಸಾಥ್ ನೀಡಿದರು.

ಗೃಹಜೋತಿ ಯೋಜನೆ ನೋಂದಣಿಗೆ ಕೊನೆಯ ದಿನಾಂಕವಿಲ್ಲ: ಸಚಿವ ಕೆ.ಜೆ.ಜಾರ್ಜ್
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಚಿವ ಕೆ.ಜೆ.ಜಾರ್ಜ್ ಅವರು, ಗೃಹಜೋತಿ ಯೋಜನೆ ನೋಂದಣಿಗೆ ಅಂತಿಮ ದಿನಾಂಕ ಇಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಕರ್ನಾಟಕದಲ್ಲೂ ಜೋಡೋ ಯಾತ್ರೆ ಮಾಡಿದ್ದರು. ಭಾರತ ಜೋಡೋ ಯಾತ್ರೆ ವೇಳೆ ಸಾಮಾನ್ಯ ಜನರ ಜೊತೆ ಚರ್ಚೆ ಮಾಡಿ ಅವರ ಸಮಸ್ಯೆ ಅರಿತುಕೊಂಡಿದ್ದರು. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮಧ್ಯಮ ವರ್ಗದವರು ಸಂಕಷ್ಟದಲ್ಲಿದ್ದಾರೆ. ಅವರ ಕೈ ಬಲಪಡಿಸಬೇಕು ಎಂದು ಹೇಳಿದ್ದರು. ಅವರ ಸೂಚನೆ ಮೇರೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು.

ಒಂದು ಕೋಟಿ 42 ಲಕ್ಷ ಜನರು ಗೃಹಜೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜೋತಿ ನೋಂದಣಿಗೆ ಕಡೆಯ ದಿನಾಂಕವೆಂದೇನೂ ಇಲ್ಲ. ಉಚಿತವಾಗಿ ನೀಡುವುದು ಉಡುಗೊರೆಯಲ್ಲ. ಬದಲಾಗಿ ಜನರ ಆರ್ಥಿಕ ಸ್ಥಿತಿ ಸುಧಾರಿಸವ ಪ್ರಯತ್ನವಾಗಿದೆ. ಸಾಮಾನ್ಯ ಜನರಿಗೆ ಹಣ ಉಳಿದರೆ, ಅವರು ಬೇರೆ ರೂಪದಲ್ಲಿ ಹಣ ಖರ್ಚು ಮಾಡುತ್ತಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ತೆರಿಗೆ ಬರಲಿದೆ. ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗೆಯೇ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂಡಾ ಗೆಲ್ಲಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT