ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧನ, 76 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ವಿಮಾನಗಳಲ್ಲಿ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು  ಸಂಜಯನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ವಿಮಾನಗಳಲ್ಲಿ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು  ಸಂಜಯನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಉತ್ತರಪ್ರದೇಶ ರಾಜ್ಯದ ಹರಿಶ್ಚಂದ್ರ, ಜಸ್ವೀರ್, ಚ್ದಂರಭಾನು ಹಾಗೂ ದೆಹಲಿಯ ಮಿಂಟು ವಿಶ್ವಾಸ್ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಡಾಲರ್ಸ್ ಕಾಲೋನಿಯಲ್ಲಿರುವ ಸಾಫ್ಟ್ ವೇರ್ ಇಂಜಿನಿಯರ್ ಮನೆಯಲ್ಲಿ ಕಳ್ಳತನ ಮಾಡಿದ್ದರು. ಇವರಿಂದ 78 ಲಕ್ಷ ಮೌಲ್ಯದ ಕದ್ದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜುಲೈ 29 ರಂದು ಡಾಲರ್ಸ್ ಕಾಲೋನಿಯಲ್ಲಿ ಕಳ್ಳತನ ನಡೆಸಿತ್ತು. ಆರೋಪಿಗಳು ವಿಮಾನದಲ್ಲಿ ನಗರಕ್ಕೆ ಬಂದು, ನಂತರ ಯಶವಂತಪುರದಲ್ಲಿರುವ ಹೋಟೆಲ್ ಅಥವಾ ಲಾಡ್ಜ್‌ನಲ್ಲಿ ಕೊಠಡಿ ಕಾಯ್ದಿರಿಸಿಕೊಂಡು ತಂಗುತ್ತಿದ್ದರು.

ನಂತರ ದ್ವಿಚಕ್ರ ವಾಹನಗಳಲ್ಲಿ ನಗರವನ್ನು ಸುತ್ತಿ, ಬೀಗ ಹಾಕಿರುವ ಮನೆಗಳನ್ನು ಗುರುತಿಸಿತ್ತು. ಹೈಟೆಕ್ ಪ್ರದೇಶದಲ್ಲಿರುವ ಮನೆಗಳನ್ನು ಗುರಿಯಾಗಿರಿಸಿಕೊಂಡು ವಾಟ್ಸಾಪ್ ನಲ್ಲಿ ಮಾಹಿತಿಗಳ ಹಂಚಿಕೊಳ್ಳುತ್ತಿದ್ದರು. ಇತ್ತೀಚೆಗೆ ಆರ್ ಎಂವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ಮೆಬಲ್ ಲಿವೀಸ್ ಎಂಬುವವರ ಮನೆಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭಕರಣವನ್ನು ದೋಚಿದ್ದರು.

ಸಂಜಯನಗರ ಠಾಣೆ ಇನ್ಸ್ ಪೆಕ್ಟರ್ ಗುರುಪ್ರಸಾದ್ ನೇತೃತ್ವದ ತಂಡ, ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧಿರಸಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶ ಹಾಗೂ ದೆಹಲಿಯಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ವೃತ್ತಿಪರ ಕ್ರಿಮಿನಲ್ ಗಳಾಗಿರುವ ಈ ನಾಲ್ವರ ವಿರುದ್ಧ ದೆಹಲಿ, ಕೇರಳ ಹಾಗೂ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT