ಜೈನ ಸನ್ಯಾಸಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ ಜೈನ್ ಸನ್ಯಾಸಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ ಎಕ್ಸ್‌ಪ್ರೆಸ್ ಸುದ್ದಿ ಸೇವೆ @ ಬೆಳಗಾವಿ ಜೈನ ಸನ್ಯಾಸಿ, ನಂದಿಪರ್ವತದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿಜಿ 
ರಾಜ್ಯ

ಜೈನ ಮುನಿ ಹತ್ಯೆ ಪ್ರಕರಣ: ನಂದಿ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿ ಭೇಟಿ, ಪರಿಶೀಲನೆ

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ಎಂ.ಎ.ಸಲೀಮ್‌ ಅವರು, ಹಿರೇಕೋಡಿಯ ನಂದಿಪರ್ವತ ಆಶ್ರಮ, ರಾಯಬಾಗ ತಾಲ್ಲೂಕಿನ ಖಟಕಬಾವಿ ಮತ್ತು ಮಾವಿನಹೊಂಡಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ಎಂ.ಎ.ಸಲೀಮ್‌ ಅವರು, ಹಿರೇಕೋಡಿಯ ನಂದಿಪರ್ವತ ಆಶ್ರಮ, ರಾಯಬಾಗ ತಾಲ್ಲೂಕಿನ ಖಟಕಬಾವಿ ಮತ್ತು ಮಾವಿನಹೊಂಡಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಾಮಕುಮಾರ ನಂದಿ ಮಹಾರಾಜರು ತಂಗಿದ್ದ ಆಶ್ರಮದ ಕೊಠಡಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯರು ಹಾಗೂ ತನಿಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಜುಲೈ 5 ರಂದು ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಲಾಗಿದ್ದು, ಈ ಭಾಗಗಳು ಬೋರ್‌ವೆಲ್‌ನಲ್ಲಿ ಪತ್ತೆಯಾಗಿತ್ತು.

ಈ ಬಗ್ಗೆ ಕ್ಷಿಪ್ರ ತನಿಖೆ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸರು, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ರಾಜ್ಯಾದ್ಯಂತ ಹಲವು ಸಂಘಟನೆಗಳು ಮತ್ತು ರಾಜಕೀಯ ಮುಖಂಡರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರಿಂದ, ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರ್ಕಾರವು ಸಿಐಡಿ ತನಿಖೆಗೆ ಹಸ್ತಾಂತರಿಸಿತ್ತು.

ಕಳೆದ ಕೆಲವು ವಾರಗಳಿಂದ ತನಿಖೆಯ ಭಾಗವಾಗಿ ಸಿಐಡಿ ತಂಡಗಳು ಹಿರೇಕುಡಿಯ ಆಶ್ರಮ ಮತ್ತು ಅಪರಾಧ ನಡೆದ ಸ್ಥಳಗಳಿಗೆ ಪದೇ ಪದೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ. ಇದರಂತೆ ಶನಿವಾರ (ಆ.5) ಸಿಐಡಿ ಡಿಜಿಪಿ ಡಾ.ಸಲೀಂ ಮತ್ತು ಅವರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸಿಐಡಿ ಐಜಿ ಮಧುಕರ ಪವಾರ್, ಸಿಐಡಿ ಎಸ್ಪಿ ವೆಂಕಟೇಶ್ ಕುಮಾರ್, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಕಾಂಗ್ರೆಸ್ ಭವನಕ್ಕಾಗಿ ಸರ್ಕಾರಿ ಭೂಮಿ ಗುಳುಂ: ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಹೇಗೆ ಲಭ್ಯವಾಯಿತು? ಸರ್ಕಾರದ ವಿರುದ್ಧ BJP ಗಂಭೀರ ಆರೋಪ

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

'ನಾಯಕತ್ವ ಬದಲಾವಣೆ ವಿಚಾರವಾಗಿ ಸಮಯ ಬಂದಾಗ ಸಿದ್ದರಾಮಯ್ಯನವರೇ ಮಾತನಾಡುತ್ತಾರೆ': ಡಿ ಕೆ ಶಿವಕುಮಾರ್

ರೈತರ ಹಿತ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

SCROLL FOR NEXT