ಬೆಳಗಾವಿಯಲ್ಲಿ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೃಹ ಜ್ಯೋತಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಫಲಾನುಭವಿಗೆ ಶೂನ್ಯ ಬಿಲ್ ನೀಡುತ್ತಿರುವುದು. 
ರಾಜ್ಯ

ಗ್ಯಾರಂಟಿ ಯೋಜನೆಗಳ ಉಳಿತಾಯದ ಹಣದಿಂದ ನಿಮ್ಮ ಮಕ್ಕಳ ಭವಿಷ್ಯ ರೂಪಿಸಿ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 4ರಿಂದ 5 ಸಾವಿರ ರೂ. ಹಣ ಉಳಿತಾಯವಾಗುತ್ತದೆ. ಆ ಹಣವನ್ನು ನಿಮ್ಮ ಮಕ್ಕಳ ಶಿಕ್ಷಣ ಮತ್ತು ಭವಿಷ್ಯ ರೂಪಿಸಲು ಬಳಸಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶನಿವಾರ ಕರೆ ನೀಡಿದರು.

ಬೆಳಗಾವಿ: 'ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 4ರಿಂದ 5 ಸಾವಿರ ರೂ. ಹಣ ಉಳಿತಾಯವಾಗುತ್ತದೆ. ಆ ಹಣವನ್ನು ನಿಮ್ಮ ಮಕ್ಕಳ ಶಿಕ್ಷಣ ಮತ್ತು ಭವಿಷ್ಯ ರೂಪಿಸಲು ಬಳಸಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶನಿವಾರ ಕರೆ ನೀಡಿದರು.

ನಗರದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ''ಸರ್ಕಾರದ ಮಹತ್ವದ ಯೋಜನೆಯಾದ ಗೃಹ ಜ್ಯೋತಿಗೆ ಚಾಲನೆ ದೊರೆತಿದೆ. ಚುನಾವಣೆ ಪೂರ್ವದಲ್ಲಿ ಗೃಹ ಜ್ಯೋತಿ ಬಗ್ಗೆ ಭರವಸೆ ನೀಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಭರವಸೆ ಈಡೇರಿಸಲಾಗಿದೆ. ಐದು ಗ್ಯಾರಂಟಿಗಳನ್ನು ನಾವು ಘೋಷಣೆ ಮಾಡಿದ್ದೇವು. ಬಹಳ ಜನಕ್ಕೆ ಆತಂಕ ಇತ್ತು. ಇಷ್ಟು ಹಣ ಎಲ್ಲಿಂದ ಹೊಂದಾಣಿಕೆ ಆಗುತ್ತೆ ಅಂತ ಚರ್ಚೆ ಮಾಡುತ್ತಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಆರ್ಥಿಕ ಇಲಾಖೆ ಹೊಣೆ ಹೊತ್ತು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದಾರೆ. ಬಡವರಿಗೆ ಯೋಜನೆ ಮುಟ್ಟಬಾರದು ಎಂದು ಅನೇಕರ ಅಭಿಪ್ರಾಯ ಆಗಿತ್ತು ಎಂದು ಹೇಳಿದರು.

200 ಯೂನಿಟ್ ಎಂದು ಮೊದಲು ಘೋಷಣೆ ಮಾಡಲಾಗಿತ್ತು. ಸರಾಸರಿ ಲೆಕ್ಕಾಚಾರ ಹಾಕಿ ಶೇಕಡಾ 10ರಷ್ಟು ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ 8 ಲಕ್ಷ ಫಲಾನುಭವಿಗಳು ನೋಂದಣಿ ಕಾರ್ಯವಾಗಿದ್ದು, ನೋಂದಣಿ ಮಾಡಿಕೊಂಡ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲು ಜಿಲ್ಲೆಯಲ್ಲಿ ವರ್ಷಕ್ಕೆ 516 ಕೋಟಿ ರೂಪಾಯಿ ಹಣವನ್ನು ಹೆಸ್ಕಾಂಗೆ ಸರ್ಕಾರ ನೀಡಿದೆ'' ಎಂದು ತಿಳಿಸಿದರು.

ಪ್ರತಿ ಕುಟುಂಬಕ್ಕೆ ಗ್ಯಾರಂಟಿ ಯೋಜನೆಗಳಿಂದ 4 ರಿಂದ 5 ಸಾವಿರ ಉಳಿತಾಯವಾಗುತ್ತಿದೆ. ಆ ಹಣ ಮಕ್ಕಳ ಭವಿಷ್ಯ, ಕುಟುಂಬದ ನಿರ್ವಹಣೆಗೆ ಉಪಯೋಗ ಆಗಬೇಕು. ಖಾಸಗಿ ಶಾಲೆಯಲ್ಲಿ ಶುಲ್ಕ ತುಂಬಲು ಹಣ ಬಳಕೆ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಕರ್ಪೂರ, ಬಾಳೆಕಾಯಿಗೆ ಹಣ ಉಪಯೋಗ ಮಾಡಬೇಡಿ. ಯಾಕೆಂದರೆ ಜಗತ್ತಿನಲ್ಲಿ ಕಳವು ಆಗದೇ ಇರೋ ವಸ್ತು ಎಂದರೆ ಅದು ಶಿಕ್ಷಣ. ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಕುಳಿತು ಏನು ಬೇಕಾದರೂ ಹ್ಯಾಕ್ ಮಾಡಬಹುದು. ಆದರೆ, ಶಿಕ್ಷಣವನ್ನು ಯಾರಿಂದಲೂ ಕಳ್ಳತನ ಮಾಡಲು ಸಾಧ್ಯವಿಲ್ಲ. ಬಸವಣ್ಣನವರ ಸಮಾನತೆ, ಅಂಬೇಡ್ಕರ್ ಸಂವಿಧಾನ ಗೌರವಿಸುವ ಶಿಕ್ಷಣ ನೀಡಿದರು.

ದೇಶದ ಹತ್ತು ರಾಜ್ಯಗಳ ಬಜೆಟ್​ಗಳಷ್ಟು ಮೊತ್ತವನ್ನು ಗ್ಯಾರಂಟಿಗೆ ಬಳಸಿದೆ. ಉಳಿದ ಹಣವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ಕೋಟಾ ಮೀರಿದರೆ, ನೀವು ಚಾರ್ಜ್ ತುಂಬಬೇಕಾಗುತ್ತದೆ‌. ಹಾಗಾಗಿ ಇತಿಮಿತಿಯಲ್ಲಿ ಬಳಕೆ ಮಾಡಿ, ಸರ್ಕಾರದ ದುಡ್ಡು ಎಂದರೆ ನಿಮ್ಮದೇ. ಹಾಗಾಗಿ ಸರಿಯಾಗಿ ವಿದ್ಯುತ್ ಬಳಸುವಂತೆ ಕಿವಿಮಾತು ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ ಇಷ್ಟು ದೊಡ್ಡ ಮೊತ್ತದ ಹಣವನ್ನು ಹೇಗೆ ಹೊಂದಿಸಲು ಸಾಧ್ಯವಾಗುತ್ತದೆ ಎಂಬ ಆತಂಕವಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡ ಜನರ ಹಿತದೃಷ್ಟಿಯಿಂದ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರು. ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಗ್ರಾಹಕರು ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ (ಹೆಸ್ಕಾಂ) ಮುಖ್ಯ ಎಂಜಿನಿಯರ್ ವಿ ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ ಸುಮಾರು 2.20 ಕೋಟಿ ಗ್ರಾಹಕರಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲೇ 10.65 ಲಕ್ಷ ಗ್ರಾಹಕರು ಯೋಜನೆಯ ಲಾಭ ಪಡೆಯಲಿದ್ದಾರೆಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT