ಸಂಗ್ರಹ ಚಿತ್ರ 
ರಾಜ್ಯ

ತನ್ನಿಂದ ದೂರಾಗುತ್ತಿದ್ದಾಳೆಂದು ಪ್ರೇಯಸಿಗೆ ರಾಡಲ್ಲಿ ಹೊಡೆದ ಪ್ರೇಮಿ: ಬಂಧನ

ತನ್ನಿಂದ ದೂರಾಗೂತ್ತಿದ್ದಾಳೆಂದು ಭಾವಿಸಿ ಪ್ರಿಯತಮೆಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದ ಪ್ರೇಮಿಯೊಬ್ಬನನ್ನು ಮೈಕೋ ಲೇಔಟ್ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ತನ್ನಿಂದ ದೂರಾಗೂತ್ತಿದ್ದಾಳೆಂದು ಭಾವಿಸಿ ಪ್ರಿಯತಮೆಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದ ಪ್ರೇಮಿಯೊಬ್ಬನನ್ನು ಮೈಕೋ ಲೇಔಟ್ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ರವಿ ಕುಮಾರ್ (28) ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಕಳೆದ ಒಂದು ವರ್ಷದಿಂದ ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಅದೇ ಕಂಪನಿಯಲ್ಲಿ ಇಂಟರ್ನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಬೇರೆ ಕಂಪನಿಗೆ ಸೇರಿಕೊಂಡಿದ್ದ ಯುವತಿ ರವಿಯ ಕರೆಗಳಿಗೆ ಸ್ಪಂದಿಸುತ್ತಿರಲಿಲ್ಲ ಎನ್ನಲಾಗಿದೆ.

ಇದರಿಂದ ಕೋಪಗೊಂಡಿದ್ದ ರವಿಗೆ ಯುವತಿಯ ಮೇಲೆ ಅನುಮಾನ ಮೂಡಿತ್ತು. ಇದರಿಂದ ಪ್ಲಾನ್ ಮಾಡಿ ಆಗಸ್ಟ್ 2ರಂದು ಪ್ರೇಯಸಿಯನ್ನ ತನ್ನ ಪಿಜಿ ಬಳಿ ಕರೆಸಿಕೊಂಡಿದ್ದಾನೆ. ಈ ವೇಳೆ ಕಬ್ಬಿಣದ ರಾಡ್‍ನಿಂದ ಯುವತಿಯ ತಲೆಯ ಮೇಲೆ ಹಲ್ಲೆ ಮಾಡಿದ್ದಾನೆ. ಕೂಡಲೇ ಯುವತಿಯನ್ನು ಸ್ಥಳೀಯರು ನಿಮ್ಹಾಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಘಟನೆ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿ ರವಿ ಕುಮಾರ್‌ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

UAPA: ಪಾಕಿಸ್ತಾನ ಮೂಲದ 23 ಉಗ್ರ ಕಾರ್ಯಕರ್ತರು ಭಯೋತ್ಪಾದಕರೆಂದು ಕೇಂದ್ರ ಸರ್ಕಾರ ಘೋಷಣೆ

'CM ಆದ ಕಾಲ್ಗುಣ ಏನೋ ರಾಜ್ಯದಲ್ಲಿ ಬರಗಾಲ ಬಂದಿದೆ, ಬೆಳೆ ಬೆಳೆಯಬೇಡಿ ಎಂದು ಧೈರ್ಯ ಇದ್ದರೆ ತಮಿಳುನಾಡಿನಲ್ಲಿ ಹೇಳಲಿ': R ಅಶೋಕ್

ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!

ಪಾರ್ಟಿ ನೆಪದಲ್ಲಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ : ಐವರು ಆರೋಪಿಗಳ ಬಂಧನ!

ಅಮೆರಿಕ ಮಾಜಿ ಅಧ್ಯಕ್ಷರ ತೂಕದ ಬಗ್ಗೆ ಟ್ರಂಪ್ ಜೋಕ್!