ಪ್ರಾತಿನಿಧಿಕ ಚಿತ್ರ 
ರಾಜ್ಯ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗಿ 16 ವರ್ಷದ ಬಾಲಕಿ ಸಾವು, ಮತ್ತೋರ್ವ ಬಾಲಕಿ ರಕ್ಷಣೆ

ಉಡುಪಿ ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಶನಿವಾರ ರಾತ್ರಿ ಪ್ರಬಲ ಅಲೆಗಳಿಗೆ ಕೊಚ್ಚಿಹೋಗಿ ಮಡಿಕೇರಿ ಮೂಲದ 16 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಶನಿವಾರ ರಾತ್ರಿ ಪ್ರಬಲ ಅಲೆಗಳಿಗೆ ಕೊಚ್ಚಿಹೋಗಿ ಮಡಿಕೇರಿ ಮೂಲದ 16 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತಳನ್ನು ಮಾನ್ಯ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ತನ್ನ ಸ್ನೇಹಿತೆ ಯಶಸ್ವಿನಿ (16) ಜತೆ ಬೀಚ್‌ಗೆ ಬಂದಿದ್ದಳು.

ಪ್ರಬಲ ಅಲೆಗಳಿಗೆ ಸಿಲುಕಿ ಇಬ್ಬರು ಬಾಲಕಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಮಲ್ಪೆಯ ಜೀವರಕ್ಷಕ ತಂಡ ದೌಡಾಯಿಸಿ ಅವರನ್ನು ರಕ್ಷಿಸಿ ದಡಕ್ಕೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಾನ್ಯ ಮೃತಪಟ್ಟಿದ್ದು, ಆಕೆಯ ಸ್ನೇಹಿತೆ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಇಬ್ಬರು ಹುಡುಗಿಯರು ತಮ್ಮ ಮನೆಗಳನ್ನು ತೊರೆದು ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಕಾಲ ಕಳೆದಿದ್ದರು. ಬಳಿಕ ಶನಿವಾರ ಸಂಜೆ ಮಲ್ಪೆ ತಲುಪಿದ್ದರು ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!