ಪತ್ನಿ ಜತೆ ವಿಜಯ್ ರಾಘವೇಂದ್ರ 
ರಾಜ್ಯ

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದೆ, ನಾಳೆ ರಾತ್ರಿ ಬೆಂಗಳೂರಿಗೆ ಮೃತದೇಹ ತಲುಪಲಿದೆ: ಬಿಕೆ ಹರಿಪ್ರಸಾದ್

ಥೈಲ್ಯಾಂಡ್​ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ...

ಬ್ಯಾಂಕಾಕ್: ಥೈಲ್ಯಾಂಡ್​ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ಅವರು ಹೇಳಿದ್ದಾರೆ. 

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್ ಅವರು, ನಾಳೆ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ ತಲುಪಲಿದೆ. ಬುಧವಾರ ಸ್ಪಂದನಾ ಅಂತ್ಯ ಸಂಸ್ಕಾರ ನೆರವೇರಲಿದೆ. ಅಂತ್ಯಕ್ರಿಯೆಯ ಸ್ಥಳದ ಬಗ್ಗೆ ವಿಜಯ್ ​ರಾಘವೇಂದ್ರ ಅವರ ತೀರ್ಮಾನವೇ ಅಂತಿಮ ಎಂದರು.

ನಟ ವಿಜಯ್ ರಾಘವೇಂದ್ರ ಅವರು ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.

ಸ್ಪಂದನಾ ಹಾಗೂ ವಿಜಯ ರಾಘವೇಂದ್ರ 26 ಆಗಸ್ಟ್‌ 2007ರಂದು ಮದುವೆ ಆಗಿದ್ದರು. ಸ್ಪಂದನಾ ತಂದೆ ನಿವೃತ್ತ ಸಹಾಯಕ ಕಮಿಷನರ್‌ ಬಿಕೆ ಶಿವರಾಮ್‌ ಅವರ ಪುತ್ರಿ. ದಂಪತಿಗೆ ಶೌರ್ಯ ಎಂಬ ಮಗ ಇದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ