ಹುಸೇನಪ್ಪ 
ರಾಜ್ಯ

ಬಳ್ಳಾರಿ: ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಹುಸೇನಪ್ಪ ರಾತ್ರಿ 8-30ರ ಸುಮಾರಿಗೆ ಬೀದರ್ ಗೆ ಹೊರಡಲು ಬ್ಯಾಗ್ ತೆಗೆದುಕೊಂಡು ಸ್ಕೂಟಿಯಲ್ಲಿ ಮನೆಯಿಂದ ಹೊರಟ್ಟಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತರು ಅವರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಕೆಕೆಆರ್ ಟಿಸಿ ಮೂಲಗಳು ತಿಳಿಸಿವೆ.

ಬೀದರ್ ನಲ್ಲಿ ನಡೆಯುತ್ತಿರುವ ಚಾಲಕರ ನೇಮಕಾತಿ ಪರೀಕ್ಷೆಗೆ ಅವರನ್ನು ನಿಯೋಜಿಸಲಾಗಿತ್ತು. ಮನೆಯಿಂದ ಕೂಗಳತೆ ದೂರದಲ್ಲಿಯೇ ಹತ್ಯೆ ನಡೆದಿದೆ.  ಹುಸೇನಪ್ಪ ಕಿರುಚಾಟಕ್ಕೆ ಮನೆಯವರು ಹೊರಗೆ ಬಂದಿದ್ದಾರೆ. ಆ ವೇಳೆಗೆ ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗಿದ್ದಾರೆ.

ಹುಸೇನಪ್ಪ ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!