ನವೀನ್ ಕುಮಾರ್ 
ರಾಜ್ಯ

ಬೆಂಗಳೂರು: ಒಲ್ಲದ ಮದುವೆ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!

ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಹಾಸನ ಮೂಲದ ನವೀನ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಿಸಿಸಿ ಲೇಔಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. 2009ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.

ನವೀನ್ ಕುಮಾರ್ ಶುಕ್ರವಾರ ಕೆಲಸಕ್ಕೆ ಹೋಗಿರಲಿಲ್ಲ ಮತ್ತು ಅವರ ಕುಟುಂಬ ಸದಸ್ಯರುಮತ್ತು  ಸಹೋದ್ಯೋಗಿಗಳು ಫೋನ್ ಮಾಡಿದ್ದಾರೆ, ಆದರೆ ಯಾವುದೇ ಫೋನ್ ಕರೆಗಳಿಗೆ ಉತ್ತರಿಸಲಿಲ್ಲ, ಹೀಗಾಗಿ ಆತನ ಕುಟುಂಬಸ್ಥರು ಮನೆ ಮಾಲೀಕರನ್ನು ಸಂಪರ್ಕಿಸಿ  ಪರಿಶೀಲಿಸುವಂತೆ ಮನವಿ ಮಾಡಿದ್ದು, ಶನಿವಾರ ಮನೆ ಮಾಲೀಕರು ಆತನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮದ್ಯದಲ್ಲಿ ವಿಷ ಬೆರೆಸಿ  ನವೀನ್ ಕುಮಾರ್  ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ . ಆಗಸ್ಟ್ 24 ರಂದು ನವೀನ್ ಮದುವೆಯನ್ನು ನಿಗದಿಪಡಿಸಲಾಗಿತ್ತು. ಮದುವೆಗಾಗಿ ಹೊಸ ಬಟ್ಟೆಸಹ ಖರೀದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆದರೆ, ತಾನು ಮದುವೆಯಾಗುವುದಾಗಿ ತನ್ನ ಸಹೋದ್ಯೋಗಿಗಳ ಬಳಿ ಹೇಳಿರಲಿಲ್ಲ. ಅವರು ಮದುವೆಯಾಗಲು ಸಿದ್ಧರಿಲ್ಲ ಅಥವಾ ಕೆಲವು ಕೌಟುಂಬಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಆತ್ಮಹತ್ಯೆಗೆ ಕಾರಣ ತಿಳಿಯಲು ತನಿಖೆ ನಡೆಸುತ್ತಿದ್ದೇವೆ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT