ಅಪಘಾತ ಮಾಡಿದ ಕಾರು 
ರಾಜ್ಯ

ಹಾವೇರಿ: ಊರಿಗೆ ತೆರಳಲು ನಿಂತಿದ್ದವರ ಮೇಲೆ ಹರಿದ ಕಾರು; ಇಬ್ಬರ ಭೀಕರ ಸಾವು

ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ  ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ  ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತರನ್ನು ವಿರುಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದರು. ಆಗ ವೇಗವಾಗಿ ಬಂದ ಕಾರು ಇಬ್ಬರ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ.

ವಿರುಪಾಕ್ಷಪ್ಪ ಕಾಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಗಂಭೀರವಾಗಿ ಗಾಯಗೊಂಡಿದ್ದ ಚಿದಾನಂದ ಕುರುಬರ ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣ ಮೃತಪಟ್ಟಿದ್ದಾರೆ.

ಅಪಘಾತದ ನಂತರ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಾರದ್ದರಿಂದ ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬಳಿಕ ಅಪಘಾತ ಸಂಭವಿಸಿದ ಕಾರು ಬೆಳಗಾವಿ ಮೂಲದ್ದು ಎಂದು ಗೊತ್ತಾಗಿದ್ದು, ಚಾಲಕನನ್ನ ಅರ್ಧ ಗಂಟೆಯಲ್ಲಿ  ಶಿಗ್ಗಾಂವಿ ಪೋಲಿಸ್ ಪಡೆ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!