ಸ್ಪಂದನಾ ಪಂಚಭೂತಗಳಲ್ಲಿ ಲೀನ 
ರಾಜ್ಯ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ

ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ...

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಇಂದು ಸಂಜೆ ಹರಿಶ್ಚಂದ್ರಘಾಟ್​ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಕುಟುಂಬಸ್ಥರು, ಹಲವು ಗಣ್ಯರು ಸ್ಪಂದನಾಗೆ ಕಣ್ಣೀರಿನ ವಿದಾಯ ಹೇಳಿದರು. 

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​ವರೆಗೆ ಸ್ಪಂದನಾ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಅಂತಿಮಯಾತ್ರೆಯ ವೇಳೆ ರಸ್ತೆಯುದ್ದಕ್ಕೂ ನೂರಾರು ಜನ ಸ್ಪಂದನಾ ಅವರ ಅಂತಿಮದರ್ಶನ ಪಡೆದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!