ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌‌ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತನನ್ನು ರಜನಿಕಾಂತ್ ಎಂದು ಗುರುತಿಸಲಾಗಿದ್ದು, ಇದೇ ಕಾಲೇಜಿನ ಹಳೆ ವಿದ್ಯಾರ್ಥಿ ಎನ್ನಲಾಗಿದೆ.

ಕಡಿಮೆ ಹಾಜರಾತಿಯಿಂದಾಗಿ ರಜನಿಕಾಂತ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದ ಕಾರಣ, 'ಕಾಶ್ಮೀರಾ1990_0' ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಆತ, ಆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಬಗ್ಗೆ ಅಸಭ್ಯ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದಾನೆ.

ಅಲ್ಲದೆ, ಸಾಧ್ಯವಾದರೆ ತನ್ನನ್ನು ಹಿಡಿಯಲಿ ಎಂದು ಆರೋಪಿ ಪೊಲೀಸರಿಗೆ ಸವಾಲು ಹಾಕಿದ್ದನು.

ತಮ್ಮ ಫೋಟೊಗಳನ್ನು ಅಪ್ಲೋಡ್ ಮಾಡಿರುವ ಕುರಿತು ವಿದ್ಯಾರ್ಥಿನಿಯರು ಜೂನ್ 20 ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ, ಅವರ ದೂರನ್ನು ನಿರ್ಲಕ್ಷಿಸಿದ್ದರಿಂದ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ ನಂತರ, ಆರೋಪಿ Instagram ನಲ್ಲಿ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾನೆ.

'ಆರೋಪಿಯು ಈ ಘಟನೆಗೆ ಕೋಮು ಬಣ್ಣ ಬಳಿಯಲು ಪ್ರಯತ್ನಿಸಿದ್ದನು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟಿಪ್ಪು ಸುಲ್ತಾನ್ (ಮೈಸೂರಿನ ಹಿಂದಿನ ದೊರೆ)ಗೆ ನಮಸ್ಕಾರ ಮಾಡುತ್ತಿರುವ ಫೋಟೊಗಳನ್ನು ಸಹ ಅಪ್ಲೋಡ್ ಮಾಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೋಸ್ಟ್‌ಗಳು ವೈರಲ್ ಆಗಿದ್ದು, ಹುಬ್ಬಳ್ಳಿಯ ಪೋಷಕರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪೊಲೀಸರು ಕಾಲೇಜಿನ ಪ್ರಾಂಶುಪಾಲರ ಹೇಳಿಕೆ ಪಡೆದಿದ್ದು, ವಿದ್ಯಾರ್ಥಿಗಳ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT