ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ) 
ರಾಜ್ಯ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ಕು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಪರಾಧಿ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲೆಯ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ಕೋರ್ಟ್) ಆದೇಶ ಪ್ರಕಟಿಸಿದೆ.

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ಕು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಪರಾಧಿ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲೆಯ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ಕೋರ್ಟ್) ಆದೇಶ ಪ್ರಕಟಿಸಿದೆ.
 
32 ವರ್ಷದ ವ್ಯಕ್ತಿಗೆ ಶಿಕ್ಷೆ ನೀಡಲಾಗಿದ್ದು ಕೋಟಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿತ್ತು. ಬ್ರಹ್ಮಾವರ ತಾಲೂಕಿನ ಬಳೆಕುದ್ರು ನಿವಾಸಿ ಅಶೋಕ್ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ತೀರ್ಪು ನೀಡಿದ್ದು, 20 ವರ್ಷಗಳ ಜೈಲು ಶಿಕ್ಷೆ ಜೊತೆ 23,000 ರೂಪಾಯಿಗಳ ದಂಡ ವಿಧಿಸಿದ್ದಾರೆ.
 
15 ವರ್ಷ ವಯಸ್ಸಿನ ಬಾಲಕಿಯೊಂದಿಗೆ ಅಶೋಕ್ ಸ್ನೇಹ ಬೆಳೆಸಿದ್ದ. ಆಕೆಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದ ಆತ ಆಕೆಯನ್ನು ಒತ್ತಾಯಪೂರ್ವಕವಾಗಿ ಮತ್ತೋರ್ವ ಆರೋಪಿ ಮನೆಗೆ ಕರೆದೊಯ್ದಿದ್ದ. 

ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಮನೆಗೆ ವಾಪಸ್ ಕರೆತಂದು ಬಿಟ್ಟಿದ್ದ.  ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಆರೋಪಿ ವ್ಯಕ್ತಿ ಬೆದರಿಕೆಯನ್ನೂ ಹಾಕಿದ್ದ. ಬಾಲಕಿ ಕುಟುಂಬ ಸದಸ್ಯರಿಗೆ ತನಗಾದ ಹಿಂಸೆಯ ಬಗ್ಗೆ ತಿಳಿಸಿ ಪೋಷಕರ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಚಾರ್ಜ್ ಶೀಟ್ ಮೂಲಕ ತಿಳಿದುಬಂದಿದೆ. 
 
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 13, 000 ರೂಪಾಯಿ ದಂಡದ ಮೊತ್ತವನ್ನು ಸಂತ್ರಸ್ತೆಗೆ ತಲುಪಿಸಲು ಸೂಚಿಸಿರುವ ಕೋರ್ಟ್, 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ. ಸಾಕ್ಷ್ಯಾಧಾರ ಕೊರತೆಯಿಂದಾಗಿ ಮತ್ತೋರ್ವ ಆರೋಪಿಯನ್ನು ಕೋರ್ಟ್ ವಜಾಗೊಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಜಿದ್ದಿಗೆ ಬಿದ್ದ ಸಿದ್ದು- ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ !

ಕುಟುಂಬವೇ ಮೊದಲು: ರಾಜಕೀಯ ವೈಷಮ್ಯ ಬದಿಗಿಟ್ಟು ಅಂತ್ಯ ಸಂಸ್ಕಾರದಲ್ಲಿ 'ಅತ್ತಿಗೆ'ಗೆ ಅಧಾರ ಸ್ತಂಭವಾಗಿ ನಿಂತ ಸುಪ್ರಿಯಾ ಸುಳೆ!

ಅಜಿತ್ ಪವಾರ್ ಪತ್ನಿ ಸುನೇತ್ರಾ ಪವರ್ ಗೆ ಡಿಸಿಎಂ ಹುದ್ದೆ?: NCP ನಾಯಕರು ಏನಂತಾರೆ, ಪಕ್ಷದ ಭವಿಷ್ಯ ಬಗ್ಗೆ ನಡೆದ ಚರ್ಚೆಯೇನು?

SCROLL FOR NEXT