ಸ್ವಾತಂತ್ರ್ಯ ಹೋರಾಟಗಾರ್ತಿ ಶಂಕುತಲಾ ಅವರನ್ನು ಸನ್ಮಾನಿಸಿದ ರಾಜ್ಯಪಾಲ. 
ರಾಜ್ಯ

ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದ ರಾಜ್ಯಪಾಲ

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು.

ಬೆಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು.

ಸ್ವಾತಂತ್ರ್ಯ ಹೋರಾಟಗಾರರಾದ ಬಸವನಗುಡಿಯ ಸಾಯಿ ವೃದ್ಧಾಶ್ರಮದಲ್ಲಿ ವಾಸವಿರುವ ಶಕುಂತಲಾ, ಯಲಚೇನಹಳ್ಳಿಯ ನಂಜಪ್ಪ ಲೇ ಔಟ್ ನಿವಾಸಿ ಎಸ್.ವಿ.ಟಿ.ಗುಪ್ತಾ, ಬನಶಂಕರಿ 3ನೇ ಹಂತದ ಶಂಕರನಾರಾಯಣರಾವ್, ಮಲ್ಲೇಶ್ವರದ ನಾಗಭೂಷಣ್ ರಾವ್ ಮತ್ತು ಭೂಪಸಂದ್ರದ ವಿನಾಯಕ ಲೇಔಟ್'ನ ಕೆ.ಸಿ.ನಾರಾಯಣಪ್ಪ ಅವರ ಮನೆಗಳಿಗೆ ಭೇಟಿ ನೀಡಿದ ರಾಜ್ಯಪಾಲರು ಭೇಟಿ ನೀಡಿದರು. ಆನಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಹಿ ತಿನಿಸಿ ಪ್ರಮಾಣಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.

ನಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

ಇರಾಕ್‌ನಲ್ಲಿ US ಪಡೆ ತಂಗಿದ್ದ ಹೋಟೆಲ್ ಮೇಲೆ ಇರಾನ್ ಬೆಂಬಲಿತ ಗುಂಪು ದಾಳಿ!

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ?: ಕಾರಣ ನೀಡಿದ Donald Trump

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

SCROLL FOR NEXT