ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 
ರಾಜ್ಯ

ಕೋವಿಡ್-19 ನಿಯಮ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಕೇಸ್ ಹಿಂಪಡೆದ ಸರ್ಕಾರ!

2022ರ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮತ್ತು ಕೆಲ ನಾಯಕರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.

ಬೆಂಗಳೂರು: 2022ರ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮತ್ತು ಕೆಲ ನಾಯಕರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.

ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಕೋವಿಡ್ ನಿರ್ಬಂಧಗಳ ಹೊರತಾಗಿಯೂ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಂಬತ್ತು ಕ್ರಿಮಿನಲ್ ಪ್ರಕರಣಗಳು ದಾಖಲಾಗಿತ್ತು. ಆ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ಇದು ಕೇವಲ ಮೇಕೆದಾಟು ಪಾದಯಾತ್ರೆ ಕೋವಿಡ್ ನಿಯಮಗಳು ಮತ್ತು ಸೆಕ್ಷನ್ 144 ಮತ್ತು ಇತರವನ್ನು ಉಲ್ಲಂಘಿಸುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕರೂ ಆಗಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ ಅವರ ಅರ್ಜಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

'ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ (ಅಂದಿನ ವಿರೋಧ ಪಕ್ಷದ ನಾಯಕ), ಡಿ ಕೆ ಸುರೇಶ್ (ಬೆಂಗಳೂರು ಗ್ರಾಮಾಂತರ ಸಂಸದ) ಅವರು ಪಕ್ಷದ ಸಮಾವೇಶವನ್ನು ಆಯೋಜಿಸುವ ಮೂಲಕ ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿವೆ. ತಹಶೀಲ್ದಾರ್ ರಾಮನಗರ ಮತ್ತು ಇತರ ಒಂಬತ್ತು ಪ್ರಕರಣಗಳು ಈ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಿವೆ ಎಂದು ಅವರು ಹೇಳಿದರು.

ನಮ್ಮ ನೀರು, ನಮ್ಮ ಹಕ್ಕು ಎಂಬ ಘೋಷದೊಂದಿಗೆ ಆರಂಭದಲ್ಲಿ ರಾಮನಗರ ಜಿಲ್ಲೆಯ ಕನಕಪುರದ ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮದಲ್ಲಿ 2022ರ ಜನವರಿ 9ರಂದು ಪ್ರಾರಂಭವಾದ ಮೆರವಣಿಗೆ ಜನವರಿ 19ರಮದಪ ಬಸವನಗುಡಿಯಲ್ಲಿ ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದಾಗಿ ಕೋವಿಡ್ ನಿರ್ಬಂಧಗಳ ಉಲ್ಲಂಘನೆಯ ಕುರಿತಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಪ್ರವೇಶಿಸಿ ಪಾದಯಾತ್ರೆಯನ್ನು ನಿಲ್ಲಿಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜನವರಿ 13ರಂದು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.

ಅಲ್ಲದೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಿಗೂ ಕೊರೊನಾ ಸೋಂಕು ತಗುಲಿತ್ತು. ಫೆಬ್ರವರಿ ಅಂತ್ಯದಲ್ಲಿ ಪಕ್ಷವು ಮತ್ತೆ ಪಾದಯಾತ್ರೆಯನ್ನು ಪುನರಾರಂಭಿಸಿತು. ಮಾರ್ಚ್ 3ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮುಕ್ತಾಯವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT