ರಾಜ್ಯ

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ, ಪೊಲೀಸ್ ದೂರು

Srinivasamurthy VN

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಹೋಟೆಲೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನ ಶಾಗ್ರೀಲಾ ಹೋಟೆಲ್ ಗೆ ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ ಹೊಟೆಲ್‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

luisamaclare@proton.me ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದ್ದು, ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಪೊಲೀಸರು ತನಿಖೆ ನಡೆಸಿದ್ದಾರೆ.

SCROLL FOR NEXT