ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ಭೇಟಿ 
ರಾಜ್ಯ

BBMP ಕಚೇರಿಯಲ್ಲಿ ಅಗ್ನಿ ಅವಘಡ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ತನಿಖೆಗೆ ಆದೇಶ

ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

ಬೆಂಗಳೂರು: ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

ಗಾಯಾಳುಗಳು ದಾಖಲಾಗಿದ್ದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿದ್ದಂತೆ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಘಟನೆ ಸಂಬಂಧ ತನಿಖೆಗೆ ಸೂಚಿಸಿದ್ದೇನೆ. ಘಟನೆಯಲ್ಲಿ ಒಬ್ಬರಿಗೆ ಶೇ.38ರಷ್ಟು ಸುಟ್ಟು ಗಾಯಗಳಾಗಿದ್ದು, 48 ಗಂಟೆಗಳ ಕಾಲ ನಿಗಾದಲ್ಲಿ ಇಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಎಲ್ಲರನ್ನೂ ಐಸಿಯುಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಘಟನೆಯಲ್ಲಿ ಸಿಬ್ಬಂದಿ ಮುಖ, ಕೈಗಳಿಗೆ ಗಾಯಗಳಾಗಿವೆ, ಅದೃಷ್ಟವಶಾತ್‌ ಕಣ್ಣುಗಳಿಗೆ ಹಾನಿಯಾಗಿಲ್ಲ. ಮೇಲ್ನೋಟಕ್ಕೆ ಎಲ್ಲರೂ ಬದುಕುಳಿಯುತ್ತಾರೆಂಬ ವಿಶ್ವಾಸವಿದೆ. ಆದಷ್ಟು ಬೇಗ ಗುಣಮುಖರಾಗಲಿ ಅಂತಾ ಪ್ರಾರ್ಥಿಸುತ್ತೇನೆ. ಘಟನೆ ಹೇಗಾಯ್ತು ಎಂದು ತನಿಖೆ ನಡೆಸಲು ಆಯುಕ್ತರಿಗೆ ಸೂಚಿಸಿದ್ದೇನೆ. ಬೆಂಕಿ ಪ್ರಕರಣದ ಬಗ್ಗೆ ಎಫ್‌ಐಆರ್ ಸಹ ದಾಖಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪಾಲಿಕೆ ಕಚೇರಿಯಲ್ಲಿ ಕ್ವಾಲಿಟಿ ಕಂಟ್ರೋಲ್ ರೂಂನಲ್ಲಿ ರೋಟಿನ್ ಮೀಟಿಂಗ್ ವೇಳೆ ಅವಘಡ ಸಂಭವಿಸಿದೆ. ಕೆಳಗಡೆ ಕೇಮಿಕಲ್ ಇದ್ದು, ಲ್ಯಾಬ್ ಟೆಸ್ಟಿಂಗ್ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಐದು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸುತ್ತಿದ್ದಂತೆ ಇಬ್ಬರು ಅಪರೇಟರ್ಸ್ ಸುರೇಶ್ ಮತ್ತು ಆನಂದ್ ಕೆಳಗಡೆ ಬಂದಿದ್ದಾರೆ. ನಂತರ ಹೊರಗಡೆ ಬರುವಾಗ ಬೆಂಕಿ ತಗುಲಿದೆ. ಕೆಲವರಿಗೆ ಶೇ.28 ರಷ್ಟು, ಇನ್ನೂ ಕೆಲವರಿಗೆ ಶೇ.35 ರಿಂದ 40 ರಷ್ಟು ಗಾಯಗಳಾಗಿವೆ ಎಂದರು.

ಬಳಿಕ ಮಾತನಾಡಿದ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಕಿ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ಮಾಡಿಸುತ್ತೇವೆ. ಗಾಯಗೊಂಡಿರುವ ವ್ಯಕ್ತಿಗಳಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತೇವೆ. ಈ ಬಗ್ಗೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು. ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ, ಘಟನೆಯಲ್ಲಿ 8 ರಿಂದ 10 ಮಂದಿ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹತ್ತು ಮಂದಿಯನ್ನು ಮೊದಲು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಸುಟ್ಟ ಬಿಬಿಎಂಪಿ ನೌಕರನಿಗೆ ಸೆಂಟ್ ಮಾರ್ಥಾಸ್​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT