ಹಳ್ಳಕ್ಕೆ ಬಿದ್ದ ಬಸ್ 
ರಾಜ್ಯ

ಮಂಡ್ಯ: ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ; ಅತಿ ವೇಗದಿಂದ ಬಂದು ಹಳ್ಳಕ್ಕೆ ಬಿದ್ದ ಸಾರಿಗೆ ಬಸ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ  ಅತಿವೇಗದಿಂದ ಬಂದ ಸಾರಿಗೆ ಬಸ್ ಬಿದ್ದಿದೆ. ಘಟನೆಯಲ್ಲಿ ಬಸ್ ಜಖಂಗೊಂಡಿದ್ದು ಚಾಲಕ ಸೇರಿದಂತೆ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಅತಿವೇಗದಿಂದ ಬಂದ ಸಾರಿಗೆ ಬಸ್ ಬಿದ್ದಿದೆ. ಘಟನೆಯಲ್ಲಿ ಬಸ್ ಜಖಂಗೊಂಡಿದ್ದು ಚಾಲಕ ಸೇರಿದಂತೆ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಬಸ್ ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ  ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಬಸ್ ಸೇತುವೆ ನಿರ್ಮಾಣಕ್ಕೆ ತೆಗೆದಿದ್ದ ಹಳ್ಳಕ್ಕೆ ನುಗ್ಗಿದೆ. ಬಸ್ ಹಳ್ಳಕ್ಕೆ ಬೀಳುತ್ತಿದ್ದಂತೆ ಪಿಲ್ಲರ್‌ಗಳಿಗೆ ಹಾಕಿದ್ದ ಕಬ್ಬಿಣದ ಸಲಾಕೆಗಳು ಬಾಗಿವೆ. ಅದೃಷ್ಟವಶಾತ್ ಬಸ್ ನೇರವಾಗಿ ಹಳ್ಳಕ್ಕೆ ಇಳಿದಿದೆ.

ರಸ್ತೆ ಕಾಮಗಾರಿ ಮಾಡುವ ಸ್ಥಳದಲ್ಲಿ ರಸ್ತೆಕಾಮಗಾರಿ ನಡೆಯುತ್ತಿರುವ ಸೂಚನಾಫಲಕ ಹಾಕದೆ ಇರುವುದು ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯ ಸುಧಾಕರ ಆರೋಪಿಸಿದ್ದಾರೆ.

ಇನ್ನೂ ಚಾಲಕ ಮಹದೇವಸ್ವಾಮಿ ಮಾತನಾಡಿ, ಕಾಮಗಾರಿ ಮಾಡುತ್ತಿರುವವರ ನಿರ್ಲಕ್ಷ್ಯತೆಯಿಂದ ಈ ಅನಾಹುತ ನಡೆದಿದ್ದು, ಯಾವುದೇ ಸೂಚನಾ ಫಲಕ ಹಾಕದೆ ಈ ಅನಾಹುತಕ್ಕೆ ಕಾರಣ ಎಂದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಅಪಘಾತದಲ್ಲಿ ಚಾಲಕನಿಗೆ ತೀವ್ರ ಗಾಯಗಳಾಗಿದೆ. ಕೆಲವು ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ಹಾಗೂ ಪ್ರಯಾಣಿಕರಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT