ಮೃತ ಪೇದೆ ಬಸನಗೌಡ 
ರಾಜ್ಯ

ರಾಯಚೂರು: 34 ವರ್ಷಕ್ಕೆ ಹಾರಿಹೋಯ್ತು ಪ್ರಾಣಪಕ್ಷಿ; ಮಲಗಿದ್ದಲ್ಲೇ ಉಸಿರು ಚೆಲ್ಲಿದ ಪೇದೆ!

ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು: ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾದ ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದ ಬಸನಗೌಡ ಏಕಾಏಕಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಂಬೇಡ್ಕರ್‌ ತತ್ವಕ್ಕೆ ತಿಲಾಂಜಲಿ: ಈಗ ಮಗ, ಇನ್ನಾರು ತಿಂಗಳು ಬಿಟ್ಟು ಮೊಮ್ಮಗನನ್ನು ಬೆಳೆಸಿ ಅಂತಾರೆ; ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ವ್ಯಂಗ್ಯ

SCROLL FOR NEXT