ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 
ರಾಜ್ಯ

ಬಿಲ್ ಬಾಕಿ ಬಿಡುಗಡೆ ಮಾಡಿ ಗುತ್ತಿಗೆದಾರರಿಗೂ ಭಾಗ್ಯಗಳನ್ನು ನೀಡಿ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹ

ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಶುಕ್ರವಾರ ಆಗ್ರಹಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಶುಕ್ರವಾರ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಸರ್ಕಾರಕ್ಕೆ ಒತ್ತಾಯಿಸಿದರು.

ಕೋಟಿ ಕೋಟಿ ರೂಪಾಯಿಗಳನ್ನು ಬ್ಯಾಂಕ್, ಖಾಸಗಿ ಮತ್ತಿತರ ಮೂಲಗಳಿಂದ ಸಾಲ ತಂದು ಕಾಮಗಾರಿಗಳನ್ನು ಮುಗಿಸಲಾಗಿರುತ್ತದೆ. ಹಲವಾರು ಪ್ರಕರಣಗಳಲ್ಲಿ ಮನೆ, ಚಿನ್ನ ನಿವೇಶನಗಳ ಪತ್ರಗಳನ್ನು ಅಡವಿಟ್ಟು ಸಾಲ ಮಾಡಲಾಗಿರುತ್ತದೆ. ಕೆಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಡುಗಡೆ ಮಾಡಲೆಂದೇ ಹಣವನ್ನು ಎತ್ತಿ ಇಡಲಾಗಿದೆ. ಉದಾಹರಣೆಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಲೆಂದೇ ಸರಕಾರ ಬಿಬಿಎಂಪಿಗೆ ರೂ. 675 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೂ ಸರಕಾರ ಬಿಬಿಎಂಪಿ ಆಯುಕ್ತರು ಮೇಲಿನಿಂದ ಆದೇಶ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಏಳು ತಿಂಗಳಿಂದ ಬಾಕಿ ಹಣ ಬರಬೇಕು. ಈಗಾಗಲೇ ಕೆಲವಷ್ಟು ಹಣ ಬಿಡುಗಡೆ ಆಗಿದೆ. ನೂರು ಕೋಟಿ ರೂ. ಸಾಲಲ್ಲ. ಈ ಬಗ್ಗೆ  ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ.

ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೂ ಮನವಿ ಸಲ್ಲಿಸಿ ಕೇಳಿಕೊಂಡಿದ್ದೇವೆ. ಎಲ್ಲರೂ ಮುಂದಿನ ವಾರ, ಕೆಲವೇ ದಿನ ಎಂದು ಸಬೂಬು ಹೇಳುತ್ತಾ ಬಂದರು. ಸರ್ಕಾರ 28-06-2023 ಮತ್ತು 30-07-2023 ರಂದು ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಣ ಬಿಡುಗಡೆ ಮಾಡುವುದು ಎಂದು ಸುತ್ತೋಲೆ ಹೊರಡಿಸಿದೆಯಾದರೂ ಕಾರ್ಯರೂಪಕ್ಕೆ ಬಂದಿಲ್ಲ. ಸಂಬಂಧಪಟ್ಟ ಸಚಿವರಿಂದ ಆದೇಶ ಬಂದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮಧ್ಯೆ ಸಂಘ ಕೈಚೆಲ್ಲಿ ಕುಳಿತುಕೊಳ್ಳದೇ ಸಿಎಂ ಮತ್ತು ಡಿಸಿಎಂ ಇಬ್ಬರಿಗೂ ನಿರಂತರವಾಗಿ ನೆನಪು ಮಾಡುತ್ತಲೇ ಬಂದಿದ್ದೇವೆ. ನಮ್ಮ ಜಿಲ್ಲಾ ಆಯಾ ಜಿಲ್ಲೆಗಳ ಮಟ್ಟದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿರುತ್ತಾರೆ. ಆದರೂ ಸರ್ಕಾರ ಗುತ್ತಿಗೆದಾರರ ಸಂಕಟವನ್ನು ಆಲಿಸಲು ಸಿದ್ಧವಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.

ಕಾಮಗಾರಿಗಳನ್ನು ಪ್ರಮುಖವಾಗಿ ಕೈಗೊಳ್ಳುವ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಲಾಖೆಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಕೆಲಸಗಳಿಗೂ ಹಣ ಬಿಡುಗಡೆ ಮಾಡದಿದ್ದರೆ ಗುತ್ತಿಗೆದಾರರು ಏನು ಮಾಡಬೇಕು?... ಹಣ ಬಿಡುಗಡೆಯಾಗುವುದು ಎರಡು ಮೂರು ತಿಂಗಳು ತಡವಾದರೂ ಗುತ್ತಿಗೆದಾರರಿಗೆ ಸಿಗುವ ಲಾಭ ಬಡ್ಡಿಗೆ ಹೋಗುತ್ತದೆ. ಇಂತಹ ಕಷ್ಟಗಳನ್ನು ಯಾರಲ್ಲಿ ಹೇಳಿಕೊಳ್ಳಬೇಕು?..ಗುತ್ತಿಗೆದಾರರು ಆಶಾಭಾವನೆಯಿಂದ ಚಾತಕ ಪಕ್ಷಿಗಳಂತೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡುವುದನ್ನೇ ಕಾಯುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಯಾವ ಸಚಿವರೂ ಕಮಿಷನ್ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ‌. ಯಾರೋ ಮೂರನೇ ವ್ಯಕ್ತಿ ಹೇಳುತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಮೊದಲಿಗೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಪತ್ರ ನೀಡಿದ್ದೆವು. ಬಳಿಕ ಪ್ರಧಾನಿ ಮೋದಿಯವರಿಗೆ ಪತ್ರ ನೀಡಿದೆವು. ಸಿದ್ದರಾಮಯ್ಯ, ಕುಮಾರಸ್ವಾಮಿ ಹೀಗೆ ಹಲವರಿಗೂ ಪತ್ರ ನೀಡಿದ್ದೆವು. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ಕರೆದಿದ್ದಕ್ಕೆ ಹೋಗಿದ್ದೆ. ಈಗ ವಿಪಕ್ಷ ನಾಯಕ ಕರೆದರೆ ಹೋಗಲ್ಲ ಎನ್ನುವುದಕ್ಕೆ ಆಗುವುದಿಲ್ಲ. ಬಿಜೆಪಿ ವಿಪಕ್ಷ ನಾಯಕ ಕರೆದರೆ ಹೋಗುತ್ತೇನೆ. ನಾವು ಗುತ್ತಿಗೆದಾರರು, ಗುತ್ತಿಗೆದಾರರ ಪರವಾಗಿ ಮಾತ್ರವೇ ನಾನು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಬೊಮ್ಮಾಯಿಗೆ ಎಷ್ಟು ಬಾರಿ ಭೇಟಿಯಾಗಿ ಮಾತನಾಡಿದ್ದೆವು. ಆದರೆ, ಅವರು ನಮಗೆ ಭೇಟಿಗೆ ಅವಕಾಶವೇ ಕೊಡಲಿಲ್ಲ. ಅವರಿಗೆ ಮನವಿ ಪತ್ರ ಕೊಟ್ಟೆವು, ಜೇಬಲ್ಲಿ ಇಟ್ಟುಕೊಂಡರು. ಆದರೆ ಕರೆದು ಮಾತಾಡೋ ಕೆಲಸ ಮಾಡಲಿಲ್ಲ. ಬದಲಿಗೆ ಅವರಿಗೆ ಬೇಕಾದವರಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದರು. ಆದರೂ ಅವರ ಮೇಲೆ ನಮಗೆ ಈಗಲೂ ಗೌರವ ಇದೆ ಎಂದರು.

ನಮ್ಮ ಪರಿಸ್ಥಿತಿ ಬಾಣಲೆಯಿಂದ ಬೆಂಕಿಯಂತಾಗಿದೆ. 25 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಎಲ್ಲರಿಗೂ ಭಾಗ್ಯಗಳನ್ನು ಕೊಡುತ್ತಿದೆ. ನಾವು ಕೆಲಸ ಮಾಡಿರುವುದಕ್ಕೆ ನಮಗೂ ಭಾಗ್ಯ ಕೊಡಿ, ಸರ್ಕಾರ ಬಂದು ಮೂರು ತಿಂಗಳಾದರೂ ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ನಾವು ನಾವು ಸರ್ಕಾರಕ್ಕೆ ಗಡುವು ನೀಡುತ್ತಿಲ್ಲ. ನಮಗೆ ಈಗಲೇ ಹಣ ಬಿಡುಗಡೆ ಆಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT