ಮೈಸೂರು: ವೇಗವಾಗಿ ಸೈಕಲ್ ಚಾಲನೆ; ಟೆಂಪೋ ಚಕ್ರದಡಿ ಸಿಲುಕಿ ಬಾಲಕ ಸಾವು, ಮತ್ತೋರ್ವ ಬಚಾವ್
ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ನಿಯಂತ್ರಣ ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ.
ಮೈಸೂರು: ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ನಿಯಂತ್ರಣ ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ.
ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಈತ ತನ್ನ ಸ್ನೇಹಿತನನ್ನು ಕೂರಿಸಿಕೊಂಡು ವೇಗವಾಗಿ ಸೈಕಲ್‌ನಲ್ಲಿ ಬಂದಿದ್ದಾನೆ. ಕೊನೆಗೆ ನಿಯಂತ್ರಿಸಲಾಗದೆ ರಸ್ತೆ ದಾಟುತ್ತಿದ್ದ ಟೆಂಪೋ ಟಯರ್ ಚಕ್ರದಡಿಗೆ ಹೋಗಿ ಇಬ್ಬರು ಬಿದ್ದಿದ್ದಾರೆ. ಚಕ್ರದಡಿಗೆ ಸಿಲುಕಿದಂತೆ ತೀವ್ರ ರಕ್ತಸ್ರಾವದಿಂದ ಬಾಲಾಜಿ ಸ್ಥಳದಲ್ಲೇ ಅಸುನೀಗಿದ್ದಾನೆ. ಮತ್ತೊಬ್ಬ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.