ಸಾಂದರ್ಭಿಕ ಚಿತ್ರ 
ರಾಜ್ಯ

ಕಾಂಗ್ರೆಸ್​ ಶಾಸಕನ ವಿರುದ್ಧ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದ ಮಹಿಳಾ ಕಾನ್ಸ್ ಟೇಬಲ್ ಅಮಾನತು

ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಚಿಕ್ಕಮಗಳೂರು: ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತನಗೆ ಏನಾದರೂ ಆದರೆ ಅದಕ್ಕೆ ಶಾಸಕ ಆನಂದ್ ಅವರೇ ಹೊಣೆ. ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ ಎಂದು ಮಹಿಳಾ ಪೊಲೀಸ್ ಪೇದೆ ಲಂತಾ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬಂಧಿಸಿದ ಸ್ಕ್ರೀನ್​ಶಾಟ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.

ಈ ಸಂದೇಶವನ್ನು ಗಮನಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಲತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಹೆಲ್ಮೆಟ್ ಧರಿಸದ ಕಾಂಗ್ರೆಸ್ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಆನಂದ್ ಅವರು ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲಿಗರಿಗೆ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಈ ಘಟನೆಯ ವಿಡಿಯೋ ಆಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈಗ ಲತಾ ಅವರನ್ನು ಕಡೂರು ಠಾಣೆಯಿಂದ ತರೀಕೆರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲತಾ, ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್​ ಇನ್ಸ್​ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT