ಸಾಂದರ್ಭಿಕ ಚಿತ್ರ 
ರಾಜ್ಯ

ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ರೈತ ಸಾವು

ಹೊಲದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ದಕ್ಷಿಣ ಕೊಡಗಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಎಂಬಲ್ಲಿ ಈ  ಘಟನೆ ನಡೆದಿದೆ. ಮರಗೋಡು ಗ್ರಾಮದ ನಿವಾಸಿ ಸಿ.ಬಿ.ದೇವಪ್ಪ (58) ಮೃತಪಟ್ಟ ರೈತರಾಗಿದ್ದಾರೆ. 

ಮಡಿಕೇರಿ: ಹೊಲದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ದಕ್ಷಿಣ ಕೊಡಗಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಎಂಬಲ್ಲಿ ಈ  ಘಟನೆ ನಡೆದಿದೆ. ಮರಗೋಡು ಗ್ರಾಮದ ನಿವಾಸಿ ಸಿ.ಬಿ.ದೇವಪ್ಪ (58) ಮೃತಪಟ್ಟ ರೈತರಾಗಿದ್ದಾರೆ. 

ಭಾನುವಾರ ದೇವಪ್ಪ ಅರೆಕಾಡು ನಿವಾಸಿ ತಿಮ್ಮಯ್ಯ ಎಂಬುವವರ ಜಮೀನಿನಲ್ಲಿ ಉಳುಮೆ ಮಾಡಲು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದರು. ಇಡೀ ಹೊಲವನ್ನು ಉಳುಮೆ ಮಾಡಿ ತನ್ನ ಟ್ರ್ಯಾಕ್ಟರ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಹೊಂಚು ಹಾಕಿದ ಒಂಟಿ ಆನೆ ಅವರನ್ನು ಟ್ರ್ಯಾಕ್ಟರ್‌ನಿಂದ ಹೊರಕ್ಕೆ ಎಸೆದು, ತುಳಿದು ಸಾಯಿಸಿದೆ. 

ಸ್ಥಳಕ್ಕೆ ವಿರಾಜಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಹಾಗೂ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತನನ್ನು ಬಲಿ ಪಡೆದ ನಂತರ ಕಾಡಾನೆ ಸ್ಥಳದಿಂದ ಕದಲಲಿಲ್ಲ. ಘಟನೆಯ ಪ್ರತ್ಯಕ್ಷದರ್ಶಿಗಳಾದ ಕೆಲವು ನಿವಾಸಿಗಳು ಗಾಯಾಳುಗಳ ಬಳಿಗೆ ಬರಲು ಭಯಪಟ್ಟಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ, ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಗಾಯಾಳು ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!