ಮಗನ ಜೊತೆಗೆ ಸಾವನ್ನಪ್ಪಿದ್ದ ವಿಜಯಲಕ್ಷ್ಮಿ 
ರಾಜ್ಯ

ಪತಿಯ ಸಾವಿನಿಂದ ಮಾನಸಿಕ ಖಿನ್ನತೆ, ಮಗನ ಜೊತೆಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ!

ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ.

ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಬನ್ನೇರುಘಟ್ಟದ ​​ಸಿಕೆ ಪಾಳ್ಯ ನಿವಾಸಿಗಳಾದ ವಿಜಯಲಕ್ಷ್ಮಿ (39) ಮತ್ತು ಹರಿಹರನ್ ಎಂದು ಗುರುತಿಸಲಾಗಿದೆ.

ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತನ್ನ ಪತಿ ಗಣೇಶನನ್ನು ಕಳೆದುಕೊಂಡಿದ್ದ ಲಕ್ಷ್ಮಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು  ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಗನನ್ನು ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿರುವುದಾಗಿ  ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!