ಬೆಂಗಳೂರು: ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು.
ಮೊದಲಿಗೆ ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜೊತೆಗೆ ನಡೆದ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತು ಚರ್ಚೆ ನಡೆಸಿದರು.
ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕರಾದ ಕೃಷ್ಣಪ್ಪ, ಎ. ಸಿ. ಶ್ರೀನಿವಾಸ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಎಂಎಲ್ಸಿ ಗಳಾದ ಯು ಬಿ ವೆಂಕಟೇಶ್, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.
ನಂತರ ಕೋಲಾರ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಲೋಕಸಭಾ ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲಾ ಶಾಸಕರ ಸರ್ವ ಒಮ್ಮತದ ಅಭ್ಯರ್ಥಿಯನ್ನು ಲೋಕಸಭಾ ಕಣಕ್ಕೆ ಇಳಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸುವುದಾಗಿ ಎಲ್ಲಾ ಶಾಸಕರೂ ಭರವಸೆಯ ಮಾತುಗಳನ್ನಾಡಿದರು.