ಸಂಗ್ರಹ ಚಿತ್ರ 
ರಾಜ್ಯ

ಹುಡುಗಿ ವಿಚಾರಕ್ಕೆ ಜಗಳ: ವಿದ್ಯಾರ್ಥಿಗಳ ನಡುವಿನ ಮಾರಾಮಾರಿಗೆ ಕಗ್ಗದಾಸಪುರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ

ಹುಡುಗಿ ವಿಚಾರಕ್ಕೆ ನಾಲ್ವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಇದರ ಪರಿಣಾಮ ಕಗ್ಗದಾಸಪುರದ ಜಗದೀಶ್‌ನಗರದ ಬಿಇಎಂಎಲ್‌ ಟೌನ್‌ಶಿಪ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಸೋಮವಾರ ನಡೆಯಿತು.

ಬೆಂಗಳೂರು: ಹುಡುಗಿ ವಿಚಾರಕ್ಕೆ ನಾಲ್ವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಇದರ ಪರಿಣಾಮ ಕಗ್ಗದಾಸಪುರದ ಜಗದೀಶ್‌ನಗರದ ಬಿಇಎಂಎಲ್‌ ಟೌನ್‌ಶಿಪ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಸೋಮವಾರ ನಡೆಯಿತು.

ಬಿಇಎಂಎಲ್‌ ಟೌನ್‌ಶಿಪ್‌ನ ನಡು ರಸ್ತೆಯಲ್ಲಿ ಮೂವರು ವಿದ್ಯಾರ್ಥಿಗಳು ಮತ್ತೋರ್ವ ವಿದ್ಯಾರ್ಥಿಗೆ ಬೆಲ್ಟ್ ನಿಂದ ಥಳಿಸಿದ್ದಾರೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ತಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ನಂತರ ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ. ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯನ್ನು ಹೆಚ್ಎಎಲ್ ಪೊಲೀಸರು ಖಚಿತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3.15ರ ಸುಮಾರಿಗೆ ಗಲಾಟೆ ನಡೆಯುತ್ತಿದ್ದ ಶಬ್ಧ ಕೇಳಿ ಬಂದಿತ್ತು. ಈ ವೇಳೆ ನೋಡಿದಾಗ 14-15 ವರ್ಷದ ಮೂವರು ಹುಡುಗರು ಕೈಕೈ ಮಿಲಾಯಿಸಿಕೊಂಡು ಜಗಳ ಮಾಡುತ್ತಿದ್ದರು. ಸ್ಥಳೀಯರು, ಪಾದಚಾರಿಗಳೂ ಜಗಳವನ್ನು ನೋಡುತ್ತಿದ್ದರು. ಪೊಲೀಸರಿಗೆ ದೂರು ನೀಡಿ, ಜಗಳ ನಿಲ್ಲಿಸಿ ಎಂದು ಪದೇ ಪದೇ ಮನವಿ ಮಾಡಿದರೂ ಕೇಳಲಿಲ್ಲ. ನಂತರ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.

ಮೂವರು ವಿದ್ಯಾರ್ಥಿಗಳು ಈ ಹಿಂದೆ ಕೂಡ ಇದೇ ರೀತಿ ಎರಡು ಬಾರಿ ವಿದ್ಯಾರ್ಥಿಗಳಿಗೆ ಥಳಿಸಿದ್ದರು. ಎರಡನೇ ಬಾರಿ ನಡೆದ ಗಲಾಟೆಯಲ್ಲಿ ಚಾಕುವನ್ನು ತೋರಿಸಿ ಬೆದರಿಸಿದ್ದರು ಎಂದು ಕೆಲವರು ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ.

ಘಟನೆ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದರು. ನಂತರ ಅಸ್ತವ್ಯಸ್ತಗೊಂಡಿದ್ದ ಸಂಚಾರವನ್ನು ಸುಗಮಗೊಳಿಸಿದರು ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ಪೋಷಕರನ್ನು ಸಂಪರ್ಕಿಸಲಾಗಿದ್ದು, ಹೆಚ್ಎಎಲ್ ಪೊಲೀಸ್ ಠಾಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT