ನಮ್ಮ ಮೆಟ್ರೋ ರೈಲು(ಸಾಂದರ್ಭಿಕ ಚಿತ್ರ) 
ರಾಜ್ಯ

ನಮ್ಮ ಮೆಟ್ರೋ: ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರ ಸ್ಥಗಿತ

ಮೆಟ್ರೋ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಾಗಿ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ  ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೆಟ್ರೋ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಾಗಿ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ  ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿಸ್ತರಿತ ಮಾರ್ಗಲ್ಲಿ ಸಿಗ್ನಲಿಂಗ್ ಮತ್ತಿತರ ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು  ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5.00 ರಿಂದ ರಾತ್ರಿ 11.00 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ.

ಆಗಸ್ಟ್ 23 ಮತ್ತು 24 ರಂದು ಬೆಳಗ್ಗೆ 5 ರಿಂದ ಬೆಳಗ್ಗೆ 7ರವರೆಗೂ ಇದೇ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಬೆಳಗ್ಗೆ 7 ರ ನಂತರ ಎಂದಿನಂತೆ ಸಂಚಾರ ಇರಲಿದೆ.

ಆಗಸ್ಟ್ 20 ರಿಂದ 29ರವೆರೆಗೆ ಇದೇ ಮಾರ್ಗದ  ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ - ಕೆಆರ್ ಪುರ-ವೈಟ್ ಫೀಲ್ಡ್ ನಡುವೆ ಬೆಳಿಗ್ಗೆ 5 ರಿಂದ 7ರವರೆಗೆ ರೈಲು ಸಂಚಾರ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇಬದಲಾವಣೆಗಳು ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ