ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿಗೆ ಚಿತ್ರಹಿಂಸೆ; ಐವರ ವಿರುದ್ಧ ಪ್ರಕರಣ ದಾಖಲು

ಆರೋಪಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 9ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ತುಮಕೂರು: ಆರೋಪಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 9ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಐದು ತಿಂಗಳ ಹಿಂದೆ ತುಮಕೂರು ಜಿಲ್ಲೆಯ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿತ್ತು.

ಆರೋಪಿಗಳಲ್ಲಿ 9 ಮತ್ತು 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್ ವಾರ್ಡನ್ ಮತ್ತು ಶಾಲೆಯ ಪ್ರಾಂಶುಪಾಲರು ಸೇರಿದ್ದಾರೆ ಎನ್ನಲಾಗಿದೆ.

ಲೈಂಗಿಕ ಚಟುವಟಿಕೆಯಲ್ಲಿ ತೊಡಗಲು ನಿರಾಕರಿಸಿದ್ದಕ್ಕೆ ಆರೋಪಿಗಳು ಸಂತ್ರಸ್ತನನ್ನು ಸಿಗರೇಟ್‌ನಿಂದ ಸುಟ್ಟು, ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ ಆತ ಪ್ರಜ್ಞಾಹೀನನಾಗಿದ್ದು, ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ನಂತರ ಒಂದು ತಿಂಗಳ ಕಾಲ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಗೆ ಸ್ಥಳಾಂತರಿಸಲಾಗಿತ್ತು.

ಘಟನೆ ಐದು ತಿಂಗಳ ಹಿಂದೆ ನಡೆದಿದ್ದು, ಸಂತ್ರಸ್ತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಆತನ ಪೋಷಕರು ದೂರು ದಾಖಲಿಸಿದ್ದಾರೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಮಧ್ಯೆ, ಪ್ರಿನ್ಸಿಪಾಲ್ ಮತ್ತು ವಾರ್ಡನ್ ಈ ಆರೋಪವನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ದೂರು ನೀಡಿದರೂ, ಪ್ರಾಂಶುಪಾಲರು ತಲೆಕೆಡಿಸಿಕೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಪಾಲಕರು ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್‌ನನ್ನು ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನಾಗಿ ಹಾಗೂ ಪ್ರಾಂಶುಪಾಲರನ್ನು ಎರಡನೇ ಆರೋಪಿಯನ್ನಾಗಿ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT