ಬೆಳಗಾವಿ: ಪದೇ ಪದೆ ಪ್ರಯತ್ನಿಸಿದರೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.
ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಹೊಂದಿದ್ದನು ಮತ್ತು ಅದಕ್ಕಾಗಿ ತಯಾರಿ ನಡೆಸುತ್ತಿದ್ದನು. ಆತ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷ ಕೆಲಸ ಮಾಡಿದ್ದನು. ಆದಾಗ್ಯೂ, ಆತ ಸೇನೆಗೆ ಸೇರಲು ಹಲವು ಬಾರಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು.
ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ: ಮಗ ಆತ್ಮಹತ್ಯೆ ಮಾರನೆಯ ದಿನವೇ ತಂದೆ ಕೂಡ ಸಾವು!, NEET ಪರೀಕ್ಷೆ ಶೀಘ್ರ ರದ್ದು ಎಂದ ಸಿಎಂ
ಈ ವೈಫಲ್ಯವನ್ನು ಸಹಿಸಲಾಗದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.