ರಾಮಲಿಂಗಾರೆಡ್ಡಿ 
ರಾಜ್ಯ

ಆಕ್ರೋಶಕ್ಕೆ ಹೆದರಿದ ಸರ್ಕಾರ: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಆದೇಶ ವಾಪಸ್!

ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ,  2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು, ಶೇ‌ 50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು, ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ ಅಷ್ಟೇ.

ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದಕ್ಕೆ ಕನ್​ಫ್ಯೂಸ್ ಮಾಡಿಕೊಂಡಿಕೊಂಡು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?