ಎಂ.ಬಿ.ಪಾಟೀಲ್ 
ರಾಜ್ಯ

ಅಮೆರಿಕದ ಕಂಪನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಎಂ.ಬಿ. ಪಾಟೀಲ್

ಅಮೆರಿಕದ ಹತ್ತಾರು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿವೆ. ಇವುಗಳಿಗೆ ಸುಗಮ ಅನುಕೂಲ ಕಲ್ಪಿಸಲು ಸೂಕ್ತ ವೇದಿಕೆಯೊಂದನ್ನು ರಚಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಅಮೆರಿಕದ ಹತ್ತಾರು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿವೆ. ಇವುಗಳಿಗೆ ಸುಗಮ ಅನುಕೂಲ ಕಲ್ಪಿಸಲು ಸೂಕ್ತ ವೇದಿಕೆಯೊಂದನ್ನು ರಚಿಸಲಾಗುವುದು. ಇದರ ಜೊತೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಅಭಿವೃದ್ಧಿಪಡಿಸಿದ  ಶೇಕಡ 75 ರಷ್ಟು ಕೈಗಾರಿಕಾ ನಿವೇಶನಗಳನ್ನು ಇನ್ನು ಮುಂದೆ ಉದ್ಯಮಗಳಿಗೆ ನೀಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಅಮೆರಿಕನ್ ಚೇಬರ್ ಆಫ್ ಕಾಮರ್ಸ್ ಇನ್‌ ಇಂಡಿಯಾ ಸಂಘಟನೆಯ ಕರ್ನಾಟಕ ಘಟಕ ಶುಕ್ರವಾರ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವ ಕೈಗಾರಿಕಾ ನೀತಿಗಳು ಉತ್ತೇಜನಕಾರಿಯಾಗಿದ್ದು, ದೇಶದಲ್ಲಿ ಬೇರಾವ ರಾಜ್ಯದಲ್ಲೂ ಇರದಂತಹ ಅನುಕೂಲಗಳನ್ನು ನೀಡುತ್ತಿದೆ. ಬಿಯಾಂಡ್‌ ಬೆಂಗಳೂರು ಉಪಕ್ರಮದಡಿ, ರಾಜಧಾನಿಯಿಂದ ಆಚೆಗೆ ಹೋಗಿ ಉದ್ದಿಮೆಗಳನ್ನು ಸ್ಥಾಪಿಸುವವರಿಗೆ ರಿಯಾಯಿತಿ ಕೊಡಲಾಗುತ್ತಿದೆ. ಇನ್ನು 15 ದಿನಗಳಲ್ಲಿ ಉದ್ಯಮಿಗಳ ಸಭೆ ಕರೆದು, ಅವರ ಆಲೋಚನೆಗಳಿಗೆ ಕಿವಿಗೊಡುತ್ತೇವೆ ಎಂದು ಅವರು ಭರವಸೆ ನೀಡಿದರು.

ರಾಜ್ಯದ ಎಲ್ಲಾ ಕೈಗಾರಿಕಾ ಪ್ರದೇಶಗಳನ್ನೂ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಸರಕಾರವು ತೀರ್ಮಾನಿಸಿದ. ಇದಕ್ಕೆ ಪೂರಕವಾಗಿ ಹೊಸ ಕೈಗಾರಿಕಾ ನೀತಿಯನ್ನೂ ಜಾರಿಗೆ ತರುವ ಕೆಲಸ ನಡೆಯುತ್ತಿದೆ. ಅಗತ್ಯ ಭೂಮಿ, ನೀರು ಮತ್ತು ವಿದ್ಯುತ್‌ ಸಮೃದ್ಧವಾಗಿರುವ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಉದ್ಯಮಿಗಳು ಹೂಡಿಕೆಗೆ ಮನಸ್ಸು ಮಾಡಬೇಕು. ಅದನ್ನು ನಾವು ಸಂಪೂರ್ಣ ಸ್ವಾಗತಿಸುತ್ತೇವೆ ಎಂದು ಅವರು ಆಹ್ವಾನ ನೀಡಿದರು.

ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಎರಡು ತಿಂಗಳಲ್ಲೇ 40 ಸಾವಿರ ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರುವುದು ಖಾತ್ರಿಯಾಗಿದೆ. ಮಿಕ್ಕಂತೆ ಇನ್ನೂ 60 ಸಾವಿರ ಕೋಟಿ ರೂ. ಹೂಡಲು ಅನೇಕ ಕಂಪನಿಗಳು ಮುಂದೆ ಬಂದಿವೆ. ಅಂದರೆ, ಕ್ಷಿಪ್ರ ಕಾಲಾವಧಿಯಲ್ಲಿ 1 ಲಕ್ಷ ಕೋಟಿ ರೂ.ಗಳ ಒಟ್ಟು ಬಂಡವಾಳ ಹರಿದು ಬರಲಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಟಾಟಾ ಸಮೂಹದ ಸಂಸ್ಥೆ ಮುಂದೆ ಬಂದಿದ್ದು, ಮೂರು ಕಡೆಗಳಲ್ಲಿ ಕಾಮನ್ ಫೆಸಿಲಿಟೀಸ್ ಸೆಂಟರ್‍‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ನುಡಿದರು.

ನಮ್ಮಲ್ಲಿ ಐಟಿ ಕ್ಷೇತ್ರ ಚೆನ್ನಾಗಿದೆ. ಇದರ ಜೊತೆಗೆ ಉತ್ಪಾದನಾ ಕ್ಷೇತ್ರವೂ ಅಭಿವೃದ್ಧಿ ಆಗಬೇಕು. ಹೀಗಾಗಿ ಇದಕ್ಕೆ ಪೂರಕವಾದ ನಿಯಮಗಳನ್ನು ರೂಪಿಸಲಾಗುವುದು. ಅಮೆರಿಕದ ಕಂಪನಿಗಳು ಇ-ಮೊಬಿಲಿಟಿ, ಇಎಸ್‌ಡಿಎಂ, ಪರಿಸರಸ್ನೇಹಿ ಇಂಧನ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡುವಂತೆ ಮಾತುಕತೆಗೆ ಚಾಲನೆ ನೀಡಲಾಗಿದೆ. ಇವೆಲ್ಲವೂ ಸಾಧ್ಯವಾಗುವಂತೆ ನೋಡಿಕೊಳ್ಳಲು 'ಇನ್ವೆಸ್ಟ್‌ ಕರ್ನಾಟಕ ಫೋರಂ' ಅನ್ನು ಪುನಾರಚಿಸಲಾಗುತ್ತಿದೆ. ಜತೆಗೆ, ಹೂಡಿಕೆ ಆಕರ್ಷಿಸಲು ಸರಕಾರಕ್ಕೆ ಸೂಕ್ತ ಸಲಹೆ ನೀಡಲು 'ಸ್ಟ್ರಾಟೆಜಿಕ್ ಇನ್ವೆಸ್ಟ್‌ಮೆಂಟ್ಸ್‌ ಕಮಿಟಿ' (ಎಸ್‌ಐಸಿ)ಯನ್ನು ಕೂಡ ರಚಿಸಲಾಗುತ್ತಿದೆ ಎಂದು ಪಾಟೀಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT