ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಖಾಸಗಿ ಬಸ್ ಡಿಕ್ಕಿ, ವೃದ್ಧ ಸಾವು

ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ನಲ್ಲಿ ತೆರಳುತ್ತಿದ್ದ 79 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಪುನೀತ್ ರಾಜ್ ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್ ಮೆಂಟ್ ಬಳಿ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 19 Aug 2023, 5:05 pm

ಬೆಂಗಳೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ನಲ್ಲಿ ತೆರಳುತ್ತಿದ್ದ 79 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಪುನೀತ್ ರಾಜ್ ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್ ಮೆಂಟ್ ಬಳಿ ನಡೆದಿದೆ.

ಕದಿರೇನಹಳ್ಳಿ ನಿವಾಸಿ ಕೃಷ್ಣಾ ರೆಡ್ಡಿ (79) ಮೃತ ವ್ಯಕ್ತಿ. ಕುಮಾರಸ್ವಾಮಿ ಲೇಔಟ್ ನಿಂದ ಕತ್ರಿಗುಪ್ಪೆಗೆ ಖಾಸಗಿ ಬಸ್ ಬರುತ್ತಿತ್ತು. ಈ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಕೃಷ್ಣಾ ರೆಡ್ಡಿಯವರ ಸೈಕಲ್'ಗೆ ಬಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ.

ಇದನ್ನೂ ಓದಿ: ಕ್ಯಾಸಿನೋದಲ್ಲಿ 25 ಲಕ್ಷ ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ

Advertisement

Advertisement

ಬಸ್ ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಾ ರೆಡ್ಡಿಯವರು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಕೃಷ್ಣಾ ರೆಡ್ಡಿಯವರು ಮುಖ ಹಾಗೂ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಸ್ ಚಾಲಕನ ಅತಿ ವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ನಡುವೆ  ಸ್ಥಳಕ್ಕೆ ಬನಶಂಕರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಚಾಲಕನನ್ನು ವಶಕ್ಕೆ ಪಡೆದರು. ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement