ಸಂಗ್ರಹ ಚಿತ್ರ 
ರಾಜ್ಯ

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ

ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಹೋಗಿದ್ದ ಟೀ ಮಾರಾಟಗಾರ ಟಿ.ಎಂ.ತಿಲಕ್ ಮಣಿಕಂಠ ಅವರು, ಅಲ್ಲಿನ ಕ್ಯಾಸಿನೋದಲ್ಲಿ ರೂ.25 ಲಕ್ಷ ಗೆದ್ದಿದ್ದರು. ಬಳಿಕ ನಗರಕ್ಕೆ ವಾಪಸ್ಸಾಗಿ ವಾಟ್ಸಾಪ್ ಸ್ಟೇಟಸ್ ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದರು.

ಈ ಮಾಹಿತಿ ತಿಳಿದ ಆರೋಪಿಗಳು ಮಣಿಕಂಠ ಅವರನ್ನು ಆ.5 ರಂದು ಅಪಹರಿಸಿ ಚಿತ್ರಹಿಂಸೆ ನೀಡಿ, ಸುಲಿಗೆ ಮಾಡಿದ್ದರು. ನಂತರ ನೆಲಮಂಗಲದ ರೆಸಾರ್ಟ್‌ನಲ್ಲಿ ಬಿಟ್ಟು ಪರಾರಿಯಾಗಿದ್ದರು. ಮರುದಿನ ಮಣಿಕಂಠ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಘಟನೆ ಬಳಿಕ ತಮಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆಂಬ ವಿಚಾರ ತಿಳಿದ ಆರೋಪಿಗಳು, ನಗರದಿಂದ ಕಾಲ್ಕಿತ್ತಿದ್ದರು. ಗೋವಾಗೆ ತೆರಳಿ ಮುಂಬೈ ಮೂಲಕ ಶಿರಡಿಗೆ ತೆರಳಿದ್ದರು. ಈ ವಿಚಾರ ತಿಳಿದ ಪೊಲೀಸರು, ತಂಡ ರಚಿಸಿ ಆರೋಪಿಗಳನ್ನು ಶಿರಡಿಯಲ್ಲಿ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ರೌಡಿ ಕಾರ್ತಿಕ್, ರಾಹುಲ್, ತರುಣ್, ಮನೋಜ್, ಈಶ್ವರ್, ರಾಮಕುಮಾರ್ ಅಲಿಯಾಸ್ ದೀಪು, ಮೋಹನ್ ಹಾಗೂ ನಿಶ್ಚಲ್ ಎಂದು ಗುರ್ತಿಸಲಾಗಿದ್ದು, ಆರೋಪಿಗಳಿಂದ ರೂ.10 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ 8 ಮಂದಿಯ ಪೈಕಿ ಕಾರ್ತಿ ಹಾಗೂ ರಾಹುಲ್ ಬನಶಂಕರಿ ಪೊಲೀಸ್ ಠಾಣೆ ಮತ್ತು ವಿವಿ ಪುರಂ ಪೊಲೀಸ್ ಠಾಣೆಗಳಲ್ಲಿ ರೌಡಿ ಶೀಟರ್‌ಗಳಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT