ಸಂಗ್ರಹ ಚಿತ್ರ 
ರಾಜ್ಯ

ಬೇಕರಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ: ತಂಡ ರಚಿಸಿ ಪುಂಡರ ಪತ್ತೆಗಿಳಿದ ಪೊಲೀಸರು!

ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ಬೆಂಗಳೂರು: ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬೇಕರಿ ಶ್ರೀ ಮಂಜುನಾಥ ಕೇಕ್ ಕಾರ್ನರ್ & ಸ್ವೀಟ್ಸ್ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ದಾಳಿ ನಡೆದಿದೆ.

ಈ ವೇಳೆ ಕಲ್ಲು, ದೊಣ್ಣೆಗಳಿಂದ ಬೇಕರಿಯ ಶೋಕೇಸ್ ಒಡೆದು ಹಾಕಿದ್ದಾರೆ. ಆಹಾರ ಪದಾರ್ಥಗಳನ್ನು ನಾಶಪಡಿಸಿದ್ದಾರೆ. ಈ ವೇಳೆ ಬೇಕರಿ ಮಾಲೀಕ ಚಂದ್ರಶೇಖರ್ ಅವರು ತಡೆಯಲು ಯತ್ನ ನಡೆಸಿದ್ದರೂ, ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ದುಷ್ಕರ್ಮಿಗಳ ದಾಳಿಯಿಂದಾಗಿ ರೂ.30,000ರಿಂದ 35,000 ನಷ್ಟವಾಗಿದ್ದು, ಈ ಸಂಬಂಧ ಮಾಲೀಕ ಚಂದ್ರಶೇಖರ್ ಅವರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಬಳಿಕ ಆರೋಪಿಗಳು ತರೆಮರೆಸಿಕೊಂಡಿದ್ದು, ಇವರ ಪತ್ತೆಗಾಗಿ ತಂಡ ರಚಿಸಿರುವ ಪೊಲೀಸರು, ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?