ಸಂಗ್ರಹ ಚಿತ್ರ 
ರಾಜ್ಯ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿವಾದ: ನಾಳೆ ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ, ಸಂಪುಟ ಸಭೆಯಲ್ಲಿ ತೀರ್ಮಾನ

ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್'ದೆ ಮೇಲ್ಮನವಿ ಸಲ್ಲಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.

ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್'ದೆ ಮೇಲ್ಮನವಿ ಸಲ್ಲಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.

ಶನಿವಾರ ಸಂಜೆ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡ್ವೊಕೇಟ್‌ ಜನರಲ್‌ ಹಾಗೂ ಸಚಿವರ ಅಭಿಪ್ರಾಯದಂತೆ ಸೋಮವಾರ ಸುಪ್ರೀಂಕೋರ್ಚ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆ ಅಭಾವದ ಹಿನ್ನೆಲೆಯಲ್ಲಿ ಕಾವೇರಿನಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದೆ. ರಾಜ್ಯಕ್ಕೆ ಕುಡಿಯುವ ಅಗತ್ಯಕ್ಕೂ ನೀರಿಲ್ಲದಂತಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಪ್ರತಿನಿಧಿಗಳು ವಾದಿಸಿದ್ದರೂ ಕಾವೇರಿ ನಿರ್ವಹಣಾ ಪ್ರಾಧಿಕಾರವು ನಿತ್ಯ 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶಿಸಿದೆ. ಇದರಂತೆ ರಾಜ್ಯ ಸರ್ಕಾರ ಸ್ವಲ್ಪ ನೀರನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ರೈತರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರನ್ನು ಕರೆಸಿಕೊಂಡು ವಿಸ್ತೃತ ಚರ್ಚೆ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಿರಿಯ ಸಚಿವರು ಮೇಲ್ಮನವಿ ಹೋಗಬೇಕಾದ ಅನಿವಾರ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಪ್ರಾಧಿಕಾರದ ಸೂಚನೆಯಂತೆ ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗಲಿದೆ. ಆದ್ದರಿಂದ ರಾಜ್ಯದಲ್ಲಿನ ಮಳೆ ಅಭಾವ, ಕುಡಿಯುವ ನೀರಿನ ಅಗತ್ಯ ಹಾಗೂ ತಮಿಳುನಾಡಿನ ಜಲಾಶಯಗಳ ನೀರಿನ ಮಟ್ಟದ ಆಧಾರದ ಮೇಲೆ ಪ್ರಾಧಿಕಾರ ನೀಡಿರುವ ಆದೇಶ ರದ್ದುಪಡಿಸುವಂತೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕಾವೇರಿ ವಿವಾದ ಸಂಬಂಧ ಪ್ರತಿಪಕ್ಷಗಳ ಪ್ರತಿಭಟನೆ ಪ್ರಮುಖವಾಗಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿದ್ದಾರೆ. ಇದನ್ನು ಅಧಿಕೃತವಾಗಿಯೂ ಪ್ರಕಟಿಸಿದ್ದಾರೆ. ಹೀಗಾಗಿ ಯಾರೂ ಯಾವುದೇ ಪ್ರತಿಭಟನೆ, ಹೋರಾಟ ಮಾಡುವ ಅಗತ್ಯವಿಲ್ಲ. ಎಲ್ಲರೂ ಒಂದು ಕಡೆ ಸೇರಿ ರಾಜ್ಯದ ಹಿತದೃಷ್ಟಿಯಿಂದ ಚರ್ಚಿಸಲು ಅವಕಾಶವಿದೆ ಎಂದರು.

ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕಿಡಿಕಾರಿದ್ದು, ರೈತರ ಹಿತವನ್ನು ಕಡೆಗಣಿಸಿ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್