ಆನೆ ದಾಳಿ 
ರಾಜ್ಯ

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ದೇವಾಲಯಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿಯಿಂದ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಅಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಅರಣ್ಯದಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರು ಮೂಲದ ಗೋವಿಂದರಾಜು ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈತನ ಗೆಳೆಯ ಲೋಕೇಶ್ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ (ಆಗಸ್ಟ್‌ 19) ಮಹದೇಶ್ವರ ಬೆಟ್ಟಕ್ಕೆ ಬಂದು ಮಹದೇಶ್ವರ ಸನ್ನಿಧಿಯಲ್ಲಿ ಪೂಜೆ ಮುಗಿಸಿ ನಾಗಮಲೆಗೆ ರಾತ್ರಿ ವೇಳೆ ತೆರಳುತ್ತಿದ್ದ ವೇಳೆ ಈ ಘಟನೆ ನಡಿದಿದೆ ಎಂದು ತಿಳಿದುಬಂದಿದೆ. 

ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಆನೆ ದಾಳಿ ಮಾಡಿದ್ದು, ಈ ವೇಳೆ ಗೋವಿಂದರಾಜು ಆನೆ ತುಳಿಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಲೋಕೇಶ್ ಅಲ್ಲಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇನ್ನು ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾತ್ರಿ ವೇಳೆ ನಾಗಮಲೆಗೆ ತೆರಳಿದ್ದು ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT