ಸಂಗ್ರಹ ಚಿತ್ರ 
ರಾಜ್ಯ

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸ್ಥಳ, ದಿನಾಂಕ ಮುಂದೂಡಿಕೆ; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಹುಲ್ ಗಾಂಧಿಯಿಂದ ಚಾಲನೆಗೆ ಸಿದ್ಧತೆ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.

ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾನು ಅದೃಷ್ಟಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ, ನನ್ನ ಇಲಾಖೆಯಿಂದ ಮಹಿಳೆಯರಿಗಾಗಿ ಯೋಜನೆ ರೂಪಿಸಿ, ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಭಾನುವಾರ ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಲು ಬೆಳಗಾವಿಗೆ ಭೇಟಿ ನೀಡಿದ್ದರು.

ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರ ಉಪಸ್ಥಿತಿಯನ್ನು ಪರಿಗಣಿಸಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಆದರೆ, ಯೋಜನೆಯನ್ನು ವಿವಿಧ ವಿಭಾಗಗಳಲ್ಲಿ ಚಾಲನೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೆಬ್ಬಾಳ್ಕರ್ ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರೆ, ಅನ್ನ ಭಾಗ್ಯ ಯೋಜನೆಯನ್ನು ಶೀಘ್ರದಲ್ಲೇ ಬೆಳಗಾವಿಯಲ್ಲಿ ಉದ್ಘಾಟಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್